ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕುಟುಂಬದಲ್ಲಿನ ಮಹಿಳೆಯರ ಪಾತ್ರ ಅತ್ಯಂತ ಪ್ರಮುಖವಾದುದು ಎಂದು ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ ಎಸ್ ನಾಗಸಮುದ್ರ ಹೇಳಿದರು.
ಚಿತ್ರದುರ್ಗ ತಾಲ್ಲೂಕಿನ ಮದಕರಿಪುರ ಗ್ರಾಮದಲ್ಲಿ ಸೋಮವಾರ ಜಿಲ್ಲಾ ಆಯುಷ್ ಇಲಾಖೆ, ಅಳಗವಾಡಿ ಆಯುಷ್ಮಾನ್ ಆರೋಗ್ಯ ಮಂದಿರ, ಬಾಲಕಿಯರ ಪದವಿಪೂರ್ವ ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ ಸಹಯೋಗದಲ್ಲಿ ಸ್ವಸ್ಥ ನಾರಿ ಸಶಕ್ತ ಪರಿವಾರ ಅಭಿಯಾನ ಕಾರ್ಯಕ್ರಮ, ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮ ಹಾಗೂ ಉಚಿತ ಆಯುಷ್ ಆರೋಗ್ಯ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.
ಕುಟುಂಬದಲ್ಲಿನ ಎಲ್ಲಾ ರೀತಿಯ ಬೆಳೆವಣಿಗೆಗೆ ಮಹಿಳೆಯರು ಜೀವನ ಪರ್ಯಂತ ಒಂದಲ್ಲಾ ಒಂದು ರೀತಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ. ಹಾಗೆಯೇ ಮನೆಯಯಲ್ಲಿನ ಎಲ್ಲರ ಬಗೆಗೂ ಆರೋಗ್ಯ ಮಾತೆ ಎಂದರೆ ತಪ್ಪಾಗಲಾರದು ಎಂದು ವಿವರಿಸಿದರು.
ಪ್ರಾಸ್ತಾವಿಕ ನುಡಿಗಳನ್ನಾಡಿದ ಡಾ. ಜಿ.ಬಿ. ನಾರದಮುನಿ, ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮ ಕುರಿತು ಮಾಹಿತಿ ನೀಡಿ, ಉಚಿತ ಆಯುಷ್ ಆರೋಗ್ಯ ಶಿಬಿರದ ಪ್ರಯೋಜನ ಪಡೆಯಲು ಸಾರ್ವಜನಿಕರಲ್ಲಿ ವಿನಂತಿಸಿದರು.
ಶಿಬಿರದಲ್ಲಿ ಸುಮಾರು 152 ರೋಗಿಗಳನ್ನು ಪರೀಕ್ಷಿಸಿ ಉಚಿತ ಔಷಧಿಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ವೈದ್ಯಾಧಿಕಾರಿಗಳಾದ ಡಾ. ಆರ್.ಎಸ್. ಕೆರೂರ್, ಡಾ. ಪ್ರಭು.ಎಮ್.ಎಸ್. ಡಾ.ಪ್ರಶಾಂತ್ ಕುಮಾರ್ ಯು.ಎಮ್, ಡಾ.ದೇವೇಂದ್ರಪ್ಪ ಬೂದಿ, ಡಾ. ರೇಷ್ಮಾ ಮತ್ತು ಯೋಗ ಶಿಕ್ಷಕರಾದ ತಿಪ್ಪೇಸ್ವಾಮಿ, ರೂಪ ಮತ್ತು ಗ್ರೂಪ್ ಡಿ ನೌಕರರಾದ ರಂಗಪ್ಪ ಹಾಗೂ ಕಾಲೇಜಿನ ಎನ್.ಎಸ್.ಎಸ್ ವಿಭಾಗದ ಆಯೋಜಕರಾದ ಪೆನ್ನಯ್ಯ, ಮಲ್ಲೇಶಪ್ಪ, ಮಲ್ಲಿಕಾರ್ಜುನ್ ಇದ್ದರು.

