ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ನಗರದ ವಿಶ್ರಾಂತ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಜಗದೀಶ್ ಅವರ ತಾಯಿ ಮಂಜಮ್ಮ(88) ಅವರು ಶುಕ್ರವಾರ ನಿಧನರಾಗಿದ್ದಾರೆ.
ಮೃತ ಮಂಜಮ್ಮ ಅವರು ಪುತ್ರ ಖ್ಯಾತ ವೈದ್ಯ ಡಾ.ಜಗದೀಶ್ ಸೇರಿದಂತೆ 4 ಗಂಡು ಮಕ್ಕಳು, ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.
ಚಿತ್ರದುರ್ಗ ನಗರದ ಜೋಗಿಮಟ್ಟಿಯ ಮುಕ್ತಿಧಾಮದಲ್ಲಿ ಮಾರ್ಚ್-14 ರಂದು ಶನಿವಾರ ಬೆಳಿಗ್ಗೆ 10 ಗಂಟೆಗೆ ಮೃತರ ಅಂತ್ಯ ಸಂಸ್ಕಾರ ನೆರವೇರಿಸಲಾಗುವುದು ಎಂದು ಡಾ.ಜಗದೀಶ್ ತಿಳಿಸಿದ್ದಾರೆ.

