ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ನಿವೃತ್ತ ಐಎಎಸ್ ಅಧಿಕಾರಿ ಡಾ.ಮಮತಾ ಅವರು ಮಾಹಿತಿ ಆಯೋಗದ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಇವರು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಪಿಟ್ಲಾಲಿ ಗ್ರಾಮದವರು. ಇವರು ಕರ್ನಾಟಕ ಮಾಹಿತಿ ಆಯೋಗದ ರಾಜ್ಯ ಮಾಹಿತಿ ಆಯುಕ್ತರಾಗಿ ನೇಮಕವಾದರು. ಕ್ಯಾಬಿನೆಟ್ ದರ್ಜೆಯ ಅಧಿಕಾರದ ಸ್ಥಾನಮಾನವನ್ನು ಘನತೆವೆತ್ತ ರಾಜ್ಯಪಾಲರಾದ ಗೆಹ್ಲೋಟ್ ಅವರು ಪ್ರಮಾಣ ವಚನ ಬೋಧಿಸಿದರು.
ಈ ಸಂದರ್ಭದಲ್ಲಿ ರಾಜ್ಯಸರ್ಕಾರದ ಪರವಾಗಿ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಉಪಸ್ಥಿತರಿದ್ದು ಸರ್ಕಾರದ ಪರವಾಗಿ ಪುಷ್ಪಗುಚ್ಚ ನೀಡಿ ಅಭಿನಂದಿಸಿದರು.
2013ರ ಸರ್ಕಾರದಲ್ಲಿ ರಾಮನಗರ ಜಿಲ್ಲೆಗೆ ಉಸ್ತುವಾರಿ ಸಚಿವರಾಗಿ ಡಿ ಕೆ ಶಿವಕುಮಾರ್ ಅವರು ಇರುವಂತಹ ಸಮಯದಲ್ಲಿ ಡಾ ಮಮತಾ ಅವರು ರಾಮನಗರ ಜಿಲ್ಲೆಗೆ ಜಿಲ್ಲಾಧಿಕಾರಿಯಾಗಿದರು. ಚಿತ್ರದುರ್ಗ ಜಿಲ್ಲೆಯ ಸಮಗ್ರ ಜನತೆಯ ಪರವಾಗಿ ಡಾ.ಮಮತಾ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಕಾಂಗ್ರೆಸ್ ಮುಖಂಡ ರಘುಗೌಡ ಸಲ್ಲಿಸಿದ್ದಾರೆ.