ರೈತರ ಜಮೀನುಗಳಿಗೆ ನುಗ್ಗಿದ ನೀರು, ಸಂಜೆಯೊಳಗೆ ಪರಿಹಾರ ಒದಗಿಸಿದ ಡಾ.ಮಂಜುನಾಥ್

News Desk

ಚಂದ್ರವಳ್ಳಿ ನ್ಯೂಸ್, ಕುಣಿಗಲ್:
ಕುಣಿಗಲ್ ಬೈಪಾಸ್ ಬಳಿ ಬಾರಿ ಮಳೆಯಿಂದಾಗಿ, ಮಳೆ ನೀರು ಹೆದ್ದಾರಿ ಪಕ್ಕದ ರೈತರ ಜಮೀನುಗಳಿಗೆ ನುಗ್ಗಿದರ ಪರಿಣಾಮ ಅಪಾರ ಪ್ರಮಾಣದ ಬೆಳೆ ನಷ್ಟ ಆಗಿದ್ದು ಈ ಬಗ್ಗೆ ಶುಕ್ರವಾರ ಮಧ್ಯಾಹ್ನ ಸ್ಥಳಕ್ಕೆ ಭೇಟಿ ನೀಡಿದ್ದ ವೇಳೆ ಅಲ್ಲಿನ ರೈತರ ತಮ್ಮ ಸಮಸ್ಯೆ ತಿಳಿಸಿ ಪರಿಹರಿಸುವಂತೆ ಸಂಸದ ಡಾ.ಸಿ.ಎನ್.ಮಂಜುನಾಥ್ ಅವರನ್ನು ಕೋರಿದ್ದರು.

ಈ ಬಗ್ಗೆ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ಜೊತೆ ಸಂಸದರು ಚರ್ಚಿಸಿ ಆದಷ್ಟು ಬೇಗ ಸಮಸ್ಯೆ ಬಗೆಹರಿಸುವಂತೆ ಮನವಿ ಮಾಡಿದರು.

ಮನವಿಗೆ ಸ್ಪಂದಿಸಿ ಸಂಜೆಯ ವೇಳೆಗೆ ನೀರು ಸರಾಗವಾಗಿ ಹರಿಯಲು ಅನುವು ಮಾಡಿಕೊಟ್ಟ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳಿಗೆ ಸಂಸದರು ಧನ್ಯವಾದಗಳನ್ನು ತಿಳಿಸಿದ್ದಾರೆ.

Share This Article
error: Content is protected !!
";