ಎಕ್ಸಪ್ರೆಸ್ ಹೈವೇಗೆ ರಾಂಪುರ ಬಳಿ ಪ್ರವೇಶ ಮತ್ತು ನಿರ್ಗಮನ ವ್ಯವಸ್ಥೆ ಕಲ್ಪಿಸಿದ ಡಾ.ಮಂಜುನಾಥ್

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಮತ್ತು ಚನ್ನಪಟ್ಟಣ ಶಾಸಕರಾದ  ಸಿ.ಪಿ ಯೋಗೇಶ್ವರ್ ಅವರ ಜೊತೆಗೂಡಿ ಬೆಂಗಳೂರು-ಮೈಸೂರು ಎಕ್ಸಪ್ರೆಸ್ ಹೈವೇಗೆ ಚನ್ನಪಟ್ಟಣ ತಾಲ್ಲೂಕಿನಿಂದ ಪ್ರವೇಶ ಮತ್ತು ನಿರ್ಗಮನ ಕಲ್ಪಿಸಲು ರಾಂಪುರ ಬಳಿ ಉದ್ದೇಶಿತ ಜಾಗವನ್ನು ಪರಿಶೀಲಿಸಲಾಯಿತು ಎಂದು ಸಂಸದರು ಹಾಗೂ ವೈದ್ಯರಾದ ಡಾ.ಸಿ.ಎನ್.ಮಂಜುನಾಥ್ ಹೇಳಿದರು.

ರಾಂಪುರ ಬಳಿ ಪ್ರವೇಶ ಮತ್ತು ನಿರ್ಗಮನ ಕಲ್ಪಿಸುವುದರಿಂದ ಚನ್ನಪಟ್ಟಣ ತಾಲ್ಲೂಕಿನ ಜನತೆಗೆ ತೊಂದರೆಯಾಗಲಿದ್ದು ಈ ವ್ಯವಸ್ಥೆಯನ್ನು ಕಣ್ವ ಜಂಕ್ಷನ್ ಬಳಿ ಕಲ್ಪಿಸಿದರೆ ಚನ್ನಪಟ್ಟಣ ಸೇರಿದಂತೆ, ಕಣ್ವ ಜಲಾಶಯ, ಕೆಂಗಲ್ ದೇವಸ್ಥಾನ ಮತ್ತು ಹಳೆ NH 75 ಹೋಗುವವರಿಗೆ ಹೆಚ್ಚಿನ ಅನುಕೂಲವಾಗಲಿದೆ. ಈ ಹಿನ್ನಲೆ ಈ ಬಗ್ಗೆ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು.

ಈ ಬಗ್ಗೆ ಕೇಂದ್ರ ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಅವರಿಗೂ ಮನವಿ ಸಲ್ಲಿಸಲಾಗಿದ್ದು ಅವರೂ ಸಹ ಸಕಾರಾತ್ಮಕವಾಗಿ ಸ್ಪಂದಿಸಿರುತ್ತಾರೆ ಎಂದು ಡಾ.ಸಿ.ಎನ್ ಮಂಜುನಾಥ್ ತಿಳಿಸಿದರು.

 

Share This Article
error: Content is protected !!
";