ಚಂದ್ರವಳ್ಳಿ ನ್ಯೂಸ್, ಬಳ್ಳಾರಿ:
ಬಳ್ಳಾರಿಯ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ನೂತನ ಕುಲಸಚಿವ(ಮೌಲ್ಯಮಾಪನ) ರಾಗಿ ಡಾ. ಎನ್. ಎಂ. ಸಾಲಿ ರವರು ಫೆ:28ರ ಶುಕ್ರವಾರ ಅಧಿಕಾರ ವಹಿಸಿಕೊಂಡಿದ್ದಾರೆ.
ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡದ ರಾಜ್ಯಶಾಸ್ತ್ರ ಅಧ್ಯಯನ ವಿಭಾಗದಲ್ಲಿ ಪ್ರಾಧ್ಯಾಪಕರಾಗಿದ್ದ ಡಾ. ಎನ್. ಎಂ. ಸಾಲಿ ಅವರನ್ನು ಸರ್ಕಾರವು ತನ್ನ ಅಧಿಸೂಚನೆ ಸಂಖ್ಯೆ:ಇಡಿ 01 ಯು ಆರ್ ಇ 2025, ದಿನಾಂಕ:24.02.2025ರನ್ವಯ ಬಳ್ಳಾರಿಯ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯಕ್ಕೆ ಕುಲಸಚಿವ (ಮೌಲ್ಯಮಾಪನ)ರನ್ನಾಗಿ ನೇಮಿಸಿದೆ.
ಈ ಹಿಂದೆ ಕಾರ್ಯಭಾರ ವಹಿಸಿಕೊಂಡಿದ್ದ ಮೌಲ್ಯಮಾಪನ ಕುಲಸಚಿವರಾದ ಪ್ರೊ. ರಮೇಶ್ ಓ ಓಲೇಕಾರ ಅವರಿಂದ ಅಧಿಕಾರ ವಹಿಸಿಕೊಂಡಿರುತ್ತಾರೆ.