ರಾಜಕೀಯ ಮುಂಬಡ್ತಿ ಬೇಕಾಗಿದೆ-ಡಾ.ಪರಮೇಶ್ವರ್

News Desk
- Advertisement -  - Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಹುದ್ದೆಗಾಗಿ ಸತತ ಪ್ರಯತ್ನ ಮಾಡಿದ್ದಾರೆ. ಇನ್ನೂ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಹುದ್ದೆ ಬಿಡಲು ಸುತರಾಂ ಒಪ್ಪುತ್ತಿಲ್ಲ.

ಹಾಗಾಗಿ ಸಿಎಂ ಕುರ್ಚಿಗಾಗಿ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಮಧ್ಯ ನಿತ್ಯ ಗುದ್ದಾಟ ನಡೆಸುತ್ತಿದೆ. ಇದೇ ವೇಳೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಕೂಡ ತನಗೆ ರಾಜಕೀಯ ಮುಂಬಡ್ತಿ ಬೇಕಿದೆ ಎನ್ನುವ ಮೂಲಕ ತಾವು ಮುಖ್ಯಮಂತ್ರಿಯಾಗಬೇಕು ಎಂಬ ಆಸೆಯನ್ನು ಪರೋಕ್ಷವಾಗಿ ವ್ಯಕ್ತಪಡಿಸಿದ್ದಾರೆ.

- Advertisement - 

ಈ ಮೂಲಕ ತಮ್ಮ ರಾಜಕೀಯ ಆಕಾಂಕ್ಷೆಗಳನ್ನು ಅವರು ಮಾಧ್ಯಮದ ಮುಂದೆ ವ್ಯಕ್ತಪಡಿಸಿದ್ದಾರೆ.
ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು ರಾಜಕೀಯ ಪದೋನ್ನತಿ ಆಸೆ ನನಗೂ ಇದೆ
ಎಂದು ಹೇಳುವ ಮೂಲಕ ಹೈಕಮಾಂಡ್‌ ನಿರ್ಧಾರಕ್ಕೆ ಬದ್ಧ ಎಂದಿದ್ದಾರೆ.

ಪ್ರತಿಯೊಬ್ಬ ವ್ಯಕ್ತಿಗೂ ಆಂಬಿಷನ್ ಇರಬೇಕು ಎಂದು ತಮ್ಮ ಭಾವನೆಯನ್ನು ಅವರು ಹಂಚಿಕೊಂಡಿದ್ದಾರೆ. ತಾನು ಯಾವಾಗಲೂ ಆಶಾವಾದಿಯಾಗಿರಬೇಕು. ರಾಜಕೀಯಕ್ಕೆ ಸೇರುವಾಗ ಎಂಎಲ್‌ಎ ಆಗಿ, ನಂತರ ಮಂತ್ರಿಯಾಗಿ ಮುಂದುವರಿಯುವ ಆಸೆ ಇರುವುದು ಸಹಜ. ಪ್ರತಿಯೊಂದು ಹಂತದಲ್ಲೂ ಎತ್ತರದ ಸ್ಥಾನಕ್ಕೆ ಹೋಗುವ ಆಲೋಚನೆ ಇರುತ್ತದೆ ಎಂದು ಹೇಳಿದ್ದಾರೆ.

- Advertisement - 

ಇದೇ ಮೊದಲ ಬಾರಿಗೆ 30ಕ್ಕೂ ಹೆಚ್ಚು ಡಿಐಜಿಗಳು ಮತ್ತು ಐಜಿಗಳಿಗೆ ಮುಂಬಡ್ತಿ ನೀಡಲಾಗಿದೆ ಎಂದು ಪರಮೇಶ್ವರ್ ತಿಳಿಸಿ ಅವರೆಲ್ಲರೂ ಉತ್ತಮವಾಗಿ ತರಬೇತಿ ಪಡೆದ ಐಪಿಎಸ್ ಅಧಿಕಾರಿಗಳಾಗಿದ್ದು, ರಾಜ್ಯಕ್ಕೆ ಉತ್ತಮ ಸೇವೆ ನೀಡುವ ನಿರೀಕ್ಷೆಯಿದೆ ಎಂದು ಹೇಳಿದರು.

ಪೊಲೀಸ್ ಇಲಾಖೆ ಆಧುನೀಕರಣಕ್ಕೆ ಕೇಂದ್ರ ಸರ್ಕಾರದಿಂದ 350 ಕೋಟಿ ರೂಪಾಯಿ ಅನುದಾನ ಮೊದಲ ಬಾರಿಗೆ ಬಂದಿದೆ ಎಂದು ಅವರು ಸಂತಸ ವ್ಯಕ್ತಪಡಿಸಿದರು.

ರಾಜ್ಯಕ್ಕೆ 350 ಕೋಟಿ ಅನುದಾನ ಬರಲು ಎಡಿಜಿಪಿ ಮುರುಗನ್ ಅವರ ಪ್ರಯತ್ನದಿಂದ ಇದು ಸಾಧ್ಯವಾಗಿದೆ ಎಂದು ಪರಮೇಶ್ವರ ತಿಳಿಸಿದರು.
ಬೆಳಗಾವಿ ಜೈಲಿನಲ್ಲಿ ಗಾಂಜಾ ಎಸೆಯುವಂತಹ ಘಟನೆಗಳ ಬಗ್ಗೆ ಡಿಜಿ ಅಲೋಕ್ ಕುಮಾರ್ ಸ್ಥಳ ಪರಿಶೀಲನೆಗೆ ಭೇಟಿ ನೀಡಲಿದ್ದಾರೆ ಎಂದು ಸಚಿವರು ಮಾಹಿತಿ ನೀಡಿದರು.

 

 

Share This Article
error: Content is protected !!
";