ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಗ್ರಾಮಾಂತರ ಪ್ರದೇಶಗಳಲ್ಲಿ ಒಳಚರಂಡಿ ವ್ಯವಸ್ಥೆಯನ್ನು ಸುವ್ಯವಸ್ಥಿತವಾಗಿ, ವೈಜ್ಞಾನಿಕವಾಗಿ ಹಾಗೂ
ನಿರಂತರವಾಗಿ ನಿರ್ವಹಿಸುವ ಸದುದ್ದೇಶದಿಂದ, ಬೇತೂರು ಜಿಲ್ಲಾ ಪಂಚಾಯತ್ ವ್ಯಾಪ್ತಿಗೆ ಒಳಪಡುವ ವಿವಿಧ ಗ್ರಾಮ ಪಂಚಾಯತಿಗಳಲ್ಲಿ ಬಳಸುವ ಸಲುವಾಗಿ ಜೆಟ್ಟಿಂಗ್ ಯಂತ್ರವನ್ನು ಅಧಿಕೃತವಾಗಿ ಹಸ್ತಾಂತರಿಸುವ ಕಾರ್ಯಕ್ರಮದಲ್ಲಿ ದಾವಣಗೆರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಭಾಗವಹಿಸಿ ವಾಹನ ಹಸ್ತಾಂತರಿಸಿದರು.
ಇದರಿಂದಾಗಿ ಗ್ರಾಮೀಣ ಪ್ರದೇಶಗಳಲ್ಲಿ ಸ್ವಚ್ಛತೆ, ಆರೋಗ್ಯ ಹಾಗೂ ಪರಿಸರ ಸಂರಕ್ಷಣೆಗೆ ಇನ್ನಷ್ಟು ಬಲ ದೊರೆಯುವಂತಾಗಿದ್ದು, ಜನಸಾಮಾನ್ಯರ ಜೀವನಮಟ್ಟ ಸುಧಾರಣೆಗೆ ಮಹತ್ವದ ಹೆಜ್ಜೆಯಾಗಲಿದೆ ಎಂದು ಸಂಸದರು ಅಭಿಪ್ರಾಯಪಟ್ಟರು.

