ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕಾಯಕಯೋಗಿ, ತ್ರಿವಿಧ ದಾಸೋಹಿ, ಸಿದ್ದಗಂಗೆಯ ಸಿದ್ದಿ ಪುರುಷ, ಪರಮ ಪೂಜ್ಯ ಶ್ರೀ ಶಿವಕುಮಾರ ಮಹಾಸ್ವಾಮಿಗಳ 118ನೇ ಜಯಂತಿಯ ಪವಿತ್ರ ದಿನವಾದ ಇಂದು ತುಮಕೂರಿನ ಶ್ರೀಕ್ಷೇತ್ರ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಪರಮಪೂಜ್ಯ ಡಾ.ಶಿವಕುಮಾರ ಶ್ರೀಗಳ ಗದ್ದುಗೆಯ ದರ್ಶನಾಶೀರ್ವಾದ ಪಡೆದು ಶ್ರೀಕ್ಷೇತ್ರ ಸಿದ್ದಗಂಗಾ ಮಠದ ಅಧ್ಯಕ್ಷರಾದ ಪರಮಪೂಜ್ಯ ಶ್ರೀ ಸಿದ್ದಲಿಂಗ ಸ್ವಾಮೀಜಿಯವರ ಆಶೀರ್ವಾದವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಪಡೆದರು.
ಪಕ್ಷದ ಮುಂದಿನ ಹೋರಾಟಗಳು ಹಾಗೂ ಸಂಘಟನೆಗೆ ಲಿಂಗೈಕ್ಯ ಶ್ರೀಗಳ ಸನ್ನಿಧಾನದ ದರುಶನ ದಿವ್ಯ ಪ್ರೇರಣೆ ನೀಡಲಿದೆ.
ಈ ಸಂದರ್ಭದಲ್ಲಿ ಶಾಸಕರಾದ ಸುರೇಶ್ ಗೌಡ, ಜೋತಿ ಗಣೇಶ್, ಮಾಜಿ ಶಾಸಕ ಎಂ.ಡಿ.ಲಕ್ಷ್ಮಿನಾರಾಯಣ್, ಜಿಲ್ಲಾಧ್ಯಕ್ಷರಾದ ರವಿಶಂಕರ್ ಹೆಬ್ಬಾಕ, ರಾಜ್ಯ ಕಾರ್ಯದರ್ಶಿ ವಿನಯ್ ಬಿದರೆ, ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ಎಂ ರುದ್ರೇಶ್, ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.