ರೈಲ್ವೆ ನಿಲ್ದಾಣಕ್ಕೆ ಡಾ.ಶಿವಕುಮಾರ ಸ್ವಾಮೀಜಿಗಳ ಹೆಸರು

News Desk

ಚಂದ್ರವಳ್ಳಿ ನ್ಯೂಸ್, ತುಮಕೂರು:
ತುಮಕೂರು ನಗರದ ರೈಲ್ವೆ ನಿಲ್ದಾಣಕ್ಕೆ ಸಿದ್ದಗಂಗಾ ಮಠದ ಲಿಂಗೈಕ್ಯ ಸ್ವಾಮೀಜಿ ಡಾ.ಶಿವಕುಮಾರ ಶ್ರೀಗಳ ಹೆಸರಿಡಲು ಪ್ರಸ್ತಾವನೆ ಬಂದಿದೆ. ಈ ಕುರಿತು ಸಿಎಂ ಜೊತೆ ಚರ್ಚಿಸಿ ಆದೇಶ ಹೊರಡಿಸುವುದಾಗಿ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದರು.

ಗುರುವಾರ ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಶ್ರೀ ಶಿವಕುಮಾರ ಸ್ವಾಮೀಜಿಗಳ ಅಪಾರ ಭಕ್ತಗಣಕ್ಕೆ ಸಿಹಿ ಸುದ್ದಿ ನೀಡಿದ್ದಾರೆ. ತುಮಕೂರು ರೈಲ್ವೆ ನಿಲ್ದಾಣಕ್ಕೆ ಶ್ರೀಗಳ ಹೆಸರಿಟ್ಟರೇ ಶಾಶ್ವತವಾಗಿರುತ್ತೆ ಶ್ರೀಗಳ ಹೆಸರಿಡುವಂತೆ ಕೇಂದ್ರ ಸಚಿವ ಸೋಮಣ್ಣ ಕೂಡ ಮನವಿ ಮಾಡಿದ್ದಾರೆ ಎಂದು ಪರಮೇಶ್ವರ್ ಅವರು ಮಾಹಿತಿ ನೀಡಿದರು.

ಕೇಂದ್ರದಿಂದ ಮಂಜೂರಾದ ಮಾತ್ರ ರೈಲ್ವೆ ನಿಲ್ದಾಣಕ್ಕೆ ಶ್ರೀಗಳ ಹೆಸರಿಡಲು ಸಾಧ್ಯ. ನಿಲ್ದಾಣಕ್ಕೆ ಶ್ರೀಗಳ ಹೆಸರಿಡುವ ವಿಚಾರದಲ್ಲಿ ವಿಳಂಬವಾಗಿಲ್ಲ. ಸಾರ್ವಜನಿಕ ಸ್ಥಳಗಳಿಗೆ ಹೆಸರಿಡಬೇಕಾದರೆ ಪ್ರೊಸಿಜರ್ ಇರುತ್ತೆ ಪ್ರಸ್ತಾವನೆಗಳು ಬಂದಾಗ ಸಾಧಕ ಬಾಧಕ ನೋಡಬೇಕಾಗುತ್ತೆ ಎಲ್ಲವನ್ನೂ ಪರಿಶೀಲಿಸಿದ ಬಳಿಕ ಪ್ರೊಸಿಜರ್ ಆಗಬೇಕಿದೆ ಎಂದು ಪರಮೇಶ್ವರ್ ತಿಳಿಸಿದರು. ತುಮಕೂರಿನ ಮಠ ಮಠಕ್ಕೂ ನಮ್ಮ ಕುಟುಂಬಕ್ಕೂ ಅವಿನಾಭವ ಸಂಬಂಧವಿದೆ. ಇತ್ತೀಚೆಗೆ ನಡೆದ ಶ್ರೀಶಿವಕುಮಾರ ಸ್ವಾಮೀಜಿಗಳ ಜನ್ಮದಿನಾಚರಣೆಗೆ ಬರಲು ಆಗಿರಲಿಲ್ಲ. ಅದಕ್ಕಾಗಿ ಸ್ವಾಮೀಜಿಗೆ ಗೌರವ ಸಮರ್ಪಣೆ ಮಾಡಲು ಇಂದು ಬಂದಿದ್ದೇನೆ. ನಮ್ಮ ತಂದೆ ಹಾಗೂ ಹಿರಿಯ ಸ್ವಾಮೀಜಿ ಜೊತೆಗೆ ಇದ್ದಂತಹ ಸಂಬಂಧ ಯಾವಾಗಲೂ ಇರುತ್ತದೆ ಎಂದಿದ್ದಾರೆ ಎಂದು ಸಚಿವರು ತಿಳಿಸಿದರು.

 

 

Share This Article
error: Content is protected !!
";