ಚಂದ್ರವಳ್ಳಿ ನ್ಯೂಸ್, ಕೂಡ್ಲಿಗಿ :
ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಶ್ರೀನಿವಾಸ್ ಎನ್ ಟಿ ರವರು ನರಸಿಂಹಗಿರಿ ಕರಡಿಹಳ್ಳಿ ಭೀಮಸಮುದ್ರ ಗೆದ್ದಲಗಟ್ಟಿ ಮಾತನಾಡುಕು ಎಂ ಬಿ ಅಯ್ಯನಹಳ್ಳಿ ಚಿಕ್ಕಜೋಗಿಹಳ್ಳಿ ಮಡಕಲಕಟ್ಟೆ ಗ್ರಾಮಗಳಲ್ಲಿ ಸಿಸಿ ರಸ್ತೆ ಹಾಗೂ ಶಾಲಾ ಕಟ ಉನ್ನತೀಕರಣ ಮತ್ತು ಡಾಂಬರೀಕರಣಕ್ಕೆ ಗುದ್ದಲಿ ಪೂಜೆ ಸಲ್ಲಿಸಿ ಮಾತನಾಡಿ ನಾನು ಚುನಾವಣೆ ಸಂದರ್ಭದಲ್ಲಿ ಕ್ಷೇತ್ರದ ಎಲ್ಲಾ ಹಳ್ಳಿಗಳಿಗೆ ಭೇಟಿ ನೀಡಿ ಅಲ್ಲಿನ ಸಮಸ್ಯೆಗಳನ್ನು ಹಾಲಿಸಿ ಇಂದು ನಮ್ಮ ಕ್ಷೇತ್ರದಲ್ಲಿ ಹೆಚ್ಚಿನ ಮಟ್ಟದ ಅನುದಾನ ತಂದು ಭೂಮಿ ಪೂಜೆ ಸಲ್ಲಿಸಿದ್ದೇನೆ.
ನಮ್ಮ ಕ್ಷೇತ್ರಕ್ಕೆ ಅನುದಾನ ತರುವ ಸಲುವಾಗಿ ರಾಜ್ಯದ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಮತ್ತು ಸಚಿವರುಗಳೊಂದಿಗೆ. ಹಗಲಿರುಳಿನದೆ ಓಡಾಡಿ ಕಲ್ಯಾಣ ಕರ್ನಾಟಕದಲ್ಲಿ ಅತಿ ಹಿಂದುಳಿದಿರುವ ನಮ್ಮ ಕೂಡ್ಲಿಗಿ ತಾಲೂಕು ಆಗಿದೆ ಆದಕಾರಣ ನಮ್ಮ ಕ್ಷೇತ್ರಕ್ಕೆ ಹೆಚ್ಚಿನ ರೀತಿ ಅನುದಾನ ಕೊಡಿ ಎಂದು ಕೇಳಿಕೊಂಡಿದ್ದೇನೆ ಅದರಂತೆ ಅವರು ಸಹ ನನಗೆ ಸ್ಪಂದಿಸಿ.
ನಮ್ಮ ಕ್ಷೇತ್ರಕ್ಕೆ ಸಾಕಷ್ಟು ಅನುದಾನವನ್ನು ಬಿಡುಗಡೆ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ತಾಲೂಕಿನ ಎಲ್ಲಾ ಹಳ್ಳಿಗಳಿಗೆ ಅಭಿವೃದ್ಧಿಯನ್ನು ನನ್ನ ತಲೆಯ ಮೇಲೆ ಹೊತ್ತು ಕಾರ್ಯಕರ್ತರು ಮತ್ತು ಮುಖಂಡರೊಂದಿಗೆ ಭೂಮಿ ಪೂಜೆ ಸಲ್ಲಿಸಲು ಬರುವೆ ಎಂದರು.
ಈ ಗುದ್ದಲಿ ಪೂಜಾ ಕಾರ್ಯಕ್ರಮದಲ್ಲಿ ಗ್ರಾ.ಪಂ. ಅಧ್ಯಕ್ಷರು ಉಪಾಧ್ಯಕ್ಷರು ಸದಸ್ಯರು ಮುಖಂಡರು ಗ್ರಾಮದ ಗ್ರಾಮಸ್ಥರು ಅಪಾರ ಸಂಖ್ಯೆಯಲ್ಲಿ ಭಾಗವಹಿಸಿದರು ಎಂದು ಸಿ ಅರುಣ್ ಕುಮಾರ್ ತಿಳಿಸಿದ್ದಾರೆ.