ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಭದ್ರಾ ಮೇಲ್ದಂಡೆ ಯೋಜನೆಯಲ್ಲಿ ಹನಿ ನೀರಾವರಿ ಪದ್ದತಿಯಲ್ಲಿ ಅನುಷ್ಠಾನ ಮಾಡಲು ಉದ್ದೇಶಿಸಿರುವ ಕಾಮಗಾರಿಯನ್ನು ಕೂಡಲೇ ತಡೆಹಿಡಿಯುವಂತೆ ವಿಶ್ವೇಶ್ವರ ಜಲ ನಿಗಮದ ಭದ್ರಾ ಮೇಲ್ದಂಡೆ ಯೋಜನೆಯ ಮುಖ್ಯ ಇಂಜಿನಿಯರ್ ಗೆ ರೈತರು ಮನವಿ ಸಲ್ಲಿಸಿ ಒತ್ತಾಯಿಸಿದ್ದಾರೆ.
ಹನಿ ನೀರಾವರಿ ಕಾಮಗಾರಿ ಮತ್ತು ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿಯ ಕುರಿತು ಸಭೆ ನಡೆಸಿ ಸಾಧಕ ಬಾಧಕಗಳನ್ನು ಚರ್ಚಿಸಲು ಹಾಗೂ ಭದ್ರಾ ಮೇಲ್ದಂಡೆ ಕಾಮಗಾರಿ ಮತ್ತು ಹನಿ ನೀರಾವರಿ ಕಾಮಗಾರಿ ಕುರಿತು ಸಭೆ ನಡೆಸುವಂತೆ ಈಗಾಗಲೇ ಎರಡು ಬಾರಿ ಇಲಾಖೆಗೆ ಮನವಿ ಪತ್ರ ಸಲ್ಲಿಸಲಾಗಿದ್ದು ಇದುವರೆಗೂ ಸಭೆ ನಡೆಸಲು ನಿರ್ಲಕ್ಷ್ಯ ವಹಿಸಲಾಗಿದೆ ಎಂದು ರೈತರು ಕಿಡಿ ಕಾರಿದರು.
ಹನಿ ನೀರಾವರಿ ಪದ್ಧತಿ ಕಾಮಗಾರಿ ನಿಲ್ಲಿಸದೆ ನಿರಂತರವಾಗಿ ಕಾಮಗಾರಿ ಮುಂದುವರಿಸಿದ್ದೀರಿಆದ್ದರಿಂದ ತಕ್ಷಣ ಕಾಮಗಾರಿ ಸ್ಥಗಿತಗೊಳಿಸಿ ತಮ್ಮ ಇಲಾಖೆಗೆ ಸಂಬಂಧಿಸಿದ ಎಲ್ಲಾ ವಿಭಾಗದ ಅಧಿಕಾರಿಗಳು ರೈತರೊಂದಿಗೆ ಸಭೆಯನ್ನು ನಡೆಸಬೇಕು ಮತ್ತೆ ನಿರ್ಲಕ್ಷ ವಹಿಸಿದರೆ ಅನಿರ್ದಿಷ್ಟ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗುವುದು ಎಂದು ರೈತ ಹೋರಾಟಗಾರರು ಎಚ್ಚರಿಸಿದ್ದಾರೆ.
ರಾಜ್ಯ ಕಾರ್ಯಧ್ಯಕ್ಷ ಈಚೆಗಟ್ಟ ಸಿದ್ದವೀರಪ್ಪ, ಜಿಲ್ಲಾಧ್ಯಕ್ಷ ಡಿಎಸ್ ಹಳ್ಳಿ ಮಲ್ಲಿಕಾರ್ಜುನ್, ಕಾರ್ಯದರ್ಶಿ ನಿಜಲಿಂಗಪ್ಪ, ಹಿರಿಯೂರು ರೈತ ಮುಖಂಡ ಸಿದ್ದರಾಮಣ್ಣ, ಹಿರಿಯೂರು ತಾಲೂಕು ಅಧ್ಯಕ್ಷ ಕೆಟೆ ತಿಪ್ಪೇಸ್ವಾಮಿ, ಹೊಳಲ್ಕೆರೆ ತಾಲೂಕು ಅಧ್ಯಕ್ಷ ರಂಗಸ್ವಾಮಿ, ಮೊಳಕಾಲ್ಮೂರು ತಾಲೂಕು ಅಧ್ಯಕ್ಷ ರವಿಕುಮಾರ್, ಚಿತ್ರದುರ್ಗ ತಾಲೂಕು ಅಧ್ಯಕ್ಷ ಮಂಜುನಾಥ್, ಹೊಸದುರ್ಗ ತಾಲೂಕು ಅಧ್ಯಕ್ಷ ಬೋರೇಶ ಇನ್ನು ಮುಂತಾದವರು ಇದ್ದರು.