ಚಾಲಕ-ಕಂ-ನಿರ್ವಾಹಕ ಹುದ್ದೆಗಳ ಹೆಚ್ಚುವರಿ ಆಯ್ಕೆಪಟ್ಟಿ ಪ್ರಕಟ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಚಾಲಕ-ಕಂ-ನಿರ್ವಾಹಕ ಹುದ್ದೆಗೆ ಪ್ರಕಟಿಸಲಾದ ಅಂತಿಮ ಆಯ್ಕೆ ಪಟ್ಟಿಯಲ್ಲಿ ಸ್ಥಾನ ಪಡೆದು ಕೌನ್ಸಿಲಿಂಗ್ ಮೂಲಕ ವಿಭಾಗಗಳಿಗೆ ನಿಯೋಜಿತರಾಗಿದ್ದ ಅಭ್ಯರ್ಥಿಗಳಲ್ಲಿ

ವರದಿ ಮಾಡಿಕೊಳ್ಳದ 143 ಅಭ್ಯರ್ಥಿಗಳ ಸ್ಥಾನದಲ್ಲಿ ಹೆಚ್ಚುವರಿ ಆಯ್ಕೆಪಟ್ಟಿಯನ್ನು ಸಿದ್ದಪಡಿಸಿ ಬೆಂಗಳೂರಿನ ಶಾಂತಿನಗರದಲ್ಲಿರುವ ಕೆಎಸ್‍ಆರ್‍ಟಿಸಿ ನಿಗಮದ ಕೇಂದ್ರ ಕಛೇರಿಯ ಸೂಚನಾ ಫಲಕ ಮತ್ತು ನಿಗಮದ ವೆಬ್‍ಸೈಟ್ www.ksrtcjobs.karnataka.gov.in ನಲ್ಲಿ ಪ್ರಕಟಿಸಲಾಗಿದೆ.

- Advertisement - 

ಹೆಚ್ಚುವರಿ ಆಯ್ಕೆ ಪಟ್ಟಿಯಲ್ಲಿ ಸ್ಥಾನ ಪಡೆದ ಅಭ್ಯರ್ಥಿಗಳಿಗೆ 2025 ನೇ ಆಗಸ್ಟ್ 23 ರಂದು ಬೆಳಿಗ್ಗೆ 10.00 ಗಂಟೆಗೆ ನಿಗಮದ ಕೇಂದ್ರ ಕಛೇರಿ, ಶಾಂತಿನಗರ, ಬೆಂಗಳೂರು-27 ಇಲ್ಲಿ ನಡೆಸುವ ಗಣಕೀಕೃತ ಕೌನ್ಸಿಲಿಂಗ್ ಮೂಲಕ ಮೆರಿಟ್ ಆಧಾರದ ಮೇಲೆ ವಿಭಾಗ / ಘಟಕಗಳಿಗೆ ನೇರವಾಗಿ ನಿಯೋಜನೆ ಮಾಡಲಾಗುವುದು.

 

- Advertisement - 

 

Share This Article
error: Content is protected !!
";