ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟಕ್ಕೆ ಚಾಲನೆ 

News Desk

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಬೆಂಗಳೂರು ಗ್ರಾಮಾಂತರ ಜಿಲ್ಲೆ ಮತ್ತು ಸರ್ಕಾರಿ ಪದವಿ ಪೂರ್ವ ಕಾಲೇಜು ಮಾದಗೊಂಡನಹಳ್ಳಿ ರಸ್ತೆ ಇವರ ಸಂಯುಕ್ತ ಆಶ್ರಯದಲ್ಲಿ ತಾಲ್ಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟ 2025-26 ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ನಡೆಯಿತು. ಕ್ರೀಡಾಕೂಟ ಉದ್ಘಾಟಿಸಿ ಕ್ರೀಡಾಜ್ಯೊತಿ ಸ್ವೀಕರಿಸಿ ಮಾತನಾಡಿದ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಪ್ರಭಾರ ಉಪ ನಿರ್ದೇಶಕ ಜಿ ಬಿ ದೊಡ್ಡಮನಿ ವಿದ್ಯಾರ್ಥಿಗಳಿಗೆ ಶಿಕ್ಷಣ ಎಷ್ಟು ಮುಖ್ಯವೋ ಕ್ರೀಡೆ ಅಷ್ಟೇ ಮುಖ್ಯ. ಏಕೆಂದರೆ ಶಿಕ್ಷಣ ಬೌದ್ದಿಕ ಮಟ್ಟವನ್ನು ಹೆಚ್ಚಿಸುವ ಸಾದನವಾದರೆ  ಕ್ರೀಡೆ ದೈಹಿಕ ಸಾಮರ್ಥ್ಯವನ್ನು ಹೆಚ್ಚಿಸುವ ಸಾಧನವಾಗುತ್ತದೆ .ಹೀಗಾಗಿ ಎಲ್ಲಾ ವಿದ್ಯಾರ್ಥಿಗಳು ಕಡ್ಡಾಯವಾಗಿ ಕ್ರೀಡೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು. 

- Advertisement - 

ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಸುನೀತಾ ಅಧ್ಯಕ್ಷತೆ ವಹಿಸಿ ಮಾತನಾಡಿ ವಿದ್ಯಾರ್ಥಿಗಳು ಸ್ಪರ್ಧೆಗಳನ್ನು ಕ್ರೀಡಾ ಮನೋಭಾವದಿಂದ ಸ್ವೀಕರಿಸಬೇಕು ಕ್ರೀಡೆಗಳಲ್ಲಿ ಸೋಲು ಗೆಲುವು ಸಾಮಾನ್ಯ ಆದರೆ ಭಾಗವಹಿಸುವುದು ಬಹಳ ಮುಖ್ಯ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಶ್ರೀ ವಾಣಿ ಕಾಲೇಜು ಪ್ರಾಂಶುಪಾಲ ಬಿ ಆರ್ ವೇಣುಗೋಪಾಲ್ ಲಾವಣ್ಯ ಸಂಯುಕ್ತ ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಎಂ ಸಿ ಮಂಜುನಾಥ್,ವಿದ್ಯಾನಿದಿ ಕಾಲೇಜು ಪ್ರಾಂಶುಪಾಲ ಬಾಲಕೃಷ್ಣ,ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾದ ಉಷಾ, ದೇವರಾಜ್ ಅರಸ್ ಕಾಲೇಜು ಪ್ರಾಂಶುಪಾಲ ಜೆ ವಿ ಚಂದ್ರಶೇಖರ್ ವಿವಿಧ ಕಾಲೇಜುಗಳ ಉಪನ್ಯಾಸಕರು ಅಪಾರ ಸಂಖ್ಯೆಯ ವಿದ್ಯಾರ್ಥಿಗಳು ಭಾಗವಹಿಸಿದ್ದರು.

- Advertisement - 

 

Share This Article
error: Content is protected !!
";