ವೈದ್ಯಕೀಯ ವಿದ್ಯಾರ್ಥಿನಿಗೆ ಡ್ರಗ್ಸ್ ನೀಡಿ ಅತ್ಯಾಚಾರ ಎಸಗಿದ ಆರೋಪಿ

News Desk

ಚಂದ್ರವಳ್ಳಿ ನ್ಯೂಸ್, ನವದೆಹಲಿ:
ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಆಕೆಯ ಸ್ನೇಹಿತನೇ ಡ್ರಗ್ಸ್ ನೀಡಿ ಅತ್ಯಾಚಾರ ವೆಸಗಿ ವಿಡಿಯೋ ರೆಕಾರ್ಡ್ ಮಾಡಿರುವ ಘಟನೆ ದೆಹಲಿಯಲ್ಲಿ ಪೈಶಾಚಿಕ ಕೃತ್ಯ ನಡೆದಿದೆ.

ದೆಹಲಿಯ ಆದರ್ಶ ನಗರ ಪ್ರದೇಶದ ಹೋಟೆಲ್‌ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿನಿ(18) ಮೇಲೆ ಆಕೆಯ ಸ್ನೇಹಿತ ಮಾದಕ ದ್ರವ್ಯ ಕುಡಿಸಿ ಅತ್ಯಾಚಾರ ಎಸಗಿದ್ದಾನೆಂದು ಆರೋಪಿಸಲಾಗಿದೆ.

- Advertisement - 

ಸೆಪ್ಟೆಂಬರ್-9 ರಂದು ಈ ಘಟನೆ ನಡೆದಿರುವುದಾಗಿ ಅಧಿಕಾರಿಗಳು ತಿಳಿಸಿದ್ದು, ಈಗಾಗಲೇ ಸಂತ್ರಸ್ಥ ಯುವತಿ ಪೊಲೀಸರಿಗೆ ದೂರು ನೀಡಿದ್ದಾರೆ. ಯುವತಿ ತನ್ನ ದೂರಿನಲ್ಲಿ, ಆರೋಪಿ – ಸಹ ವೈದ್ಯಕೀಯ ವಿದ್ಯಾರ್ಥಿಯಾಗಿದ್ದು, ಸ್ನೇಹದ ನೆಪದಲ್ಲಿ ಹೋಟೆಲ್ ಗೆ ಕರೆದೊಯ್ದು ಮತ್ತು ಬರಿಸುವ ಪಾನೀಯ ನೀಡಿ ಅತ್ಯಾಚಾರವೆಸಗಿದ್ದಾನೆ ಎಂದು ಆರೋಪಿಸಿದ್ದಾಳೆ. 

ಅತ್ಯಾಚಾರದ ದುಷ್ಕೃತ್ಯವನ್ನು ತನ್ನ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದು, ಫೋಟೋಗಳನ್ನು ಕೂಡ ತೆಗೆದುಕೊಂಡಿದ್ದಾನೆ ಎಂದು ಸಂತ್ರಸ್ಥ ಯುವತಿ ಆರೋಪಿಸಿದ್ದಾರೆ.

- Advertisement - 

ವಿಡಿಯೋ ಮತ್ತು ಫೋಟೋ ಅಪ್ಲೋಡ್ ಮಾಡುವ ಬೆದರಿಕೆ-
ದುಷ್ಕರ್ಮಿ ಅತ್ಯಾಚಾರ ಕೃತ್ಯ ಬಹಿರಂಗ ಪಡಿಸಿದರೆ ಅಥವಾ ದೂರು ನೀಡಿದರೆ
, ವಿಡಿಯೋ ಮತ್ತು ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಸಂತ್ರಸ್ಥೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಸಂತ್ರಸ್ಥ ಯುವತಿ ಹರಿಯಾಣದ ಜಿಂದ್ ನಿವಾಸಿಯಾಗಿದ್ದು, ದೆಹಲಿಯ ರೋಹಿಣಿಯಲ್ಲಿರುವ ಬಾಬಾ ಸಾಹೇಬ್ ಅಂಬೇಡ್ಕರ್ ವೈದ್ಯಕೀಯ ಕಾಲೇಜಿನ ಹಾಸ್ಟೆಲ್‌ನಲ್ಲಿ ವಾಸಿಸುತ್ತಿದ್ದಾರೆ. ಯುವತಿಯ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ಇಲ್ಲಿಯವರೆಗೆ ಯಾರನ್ನೂ ಬಂಧಿಸಿಲ್ಲ, ಆರೋಪಿಗಳಿಗಾಗಿ ಶೋಧ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

 

 

 

 

 

Share This Article
error: Content is protected !!
";