ಕಾಂಗ್ರೆಸ್ ಸರ್ಕಾರದ ದಿವ್ಯ ನಿರ್ಲಕ್ಷ್ಯಕ್ಕೆ ಬಾಣಂತಿಯರು ಸಾವು ಹೆಚ್ಚುತ್ತಿವೆ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದ ಕಾಂಗ್ರೆಸ್ ಸರ್ಕಾರದ ದಿವ್ಯ ನಿರ್ಲಕ್ಷ್ಯದಿಂದಾಗಿ ರಾಜ್ಯದಲ್ಲಿ ಬಾಣಂತಿಯರ ನಿರಂತರ ಸಾವಿನ ಸುದ್ದಿಗಳು ವರದಿಯಾಗುತ್ತಿರುವ ಬೆನ್ನಲ್ಲೇ ಕಳಪೆ ದ್ರಾವಣದ ಬಳಕೆಯ ಆಘಾತಕಾರಿ ಸಂಗತಿ ಬೆಳಕಿಗೆ ಬಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆತಂಕ ವ್ಯಕ್ತಪಡಿಸಿದ್ದಾರೆ.

ಈ ಕುರಿತು ತನಿಖೆ ನಡೆಸಿರುವ ವೈದ್ಯರ ತಂಡದ ವರದಿಯನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿ ಕೂಡಲೇ ಕಳಪೆ ದ್ರಾವಣದ ಮೂಲ ಹುಡುಕಿ ಕಠಿಣ ಶಿಕ್ಷೆಗೆ ಒಳಪಡಿಸಬೇಕು. ಅಲ್ಲದೇ ಈ ರೀತಿಯ ಘಟನೆಗಳು ಮರುಕಳಿಸದಂತೆ ಕಟ್ಟುನಿಟ್ಟಿನ ಎಚ್ಚರಿಕೆ ವಹಿಸಬೇಕು ಎಂದು ವಿಜಯೇಂದ್ರ ಆಗ್ರಹ ಮಾಡಿದ್ದಾರೆ.

 

 

- Advertisement -  - Advertisement -  - Advertisement - 
Share This Article
error: Content is protected !!
";