ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಹಾಸನ ಜಿಲ್ಲೆ ಸೇರಿದಂತೆ ರಾಜ್ಯಾದ್ಯಂತ ದಿನೇ ದಿನೇ ಹೆಚ್ಚುತ್ತಿರುವ ಹೃದಯಾಘಾತ ಪ್ರಕರಣಗಳು ಜನರಲ್ಲಿ ಹೆಚ್ಚು ಆತಂಕ ಸೃಷ್ಟಿಸುತ್ತಿದೆ ಎಂದು ಜೆಡಿಎಸ್ ಆತಂಕ ವ್ಯಕ್ತಪಡಿಸಿದೆ.
ಹಾಸನ ಜಿಲ್ಲೆಯೊಂದರಲ್ಲೇ ತಿಂಗಳ ಅವಧಿಯಲ್ಲಿ 35ಕ್ಕೂ ಹೆಚ್ಚು ಮಂದಿ ಹಠಾತ್ ಹೃದಯಾಘಾತಕ್ಕೆ ಬಲಿಯಾಗಿರುವುದು ಕಳವಳಕಾರಿಯಾಗಿದೆ.
ಪ್ರಮುಖವಾಗಿ ಯುವಜನತೆಯೇ ಹಾರ್ಟ್ ಅಟ್ಯಾಕ್ʼನಿಂದ ಸಾವಿಗೀಡಾಗುತ್ತಿದ್ದು, ರಾಜ್ಯವ್ಯಾಪಿ ಪ್ರಕರಣಗಳು ಹೆಚ್ಚು ಹೆಚ್ಚು ವರದಿಯಾಗುತ್ತಿರುವುದು ಹದಗೆಟ್ಟಿರುವ ಆರೋಗ್ಯ ಇಲಾಖೆ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ತೋರಿಸುತ್ತಿದೆ ಎಂದು ಜೆಡಿಎಸ್ ಕಿಡಿಕಾರಿದೆ.
ಕೋವಿಡ್ ಲಸಿಕೆ ಕಾರಣದಿಂದಲೇ ಹೃದಯಾಘಾತವಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ನುಣುಚಿಕೊಳ್ಳುವ ರೀತಿ ಬೇಜಾವಾಬ್ದಾರಿ ಹೇಳಿಕೆ ನೀಡಿರುವುದು ಖಂಡನೀಯ.
ಹೃದಯಾಘಾತ ಪ್ರಕರಣಗಳ ಬಗ್ಗೆ ರಾಜ್ಯ ಸರ್ಕಾರ ಸಮಗ್ರ ಅಧ್ಯಯನ ನಡೆಸಿ, ಕಾರಣಗಳನ್ನು ಗುರುತಿಸಿ, ತಡೆಗಟ್ಟಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಜನರ ಆರೋಗ್ಯ ಮತ್ತು ಸುರಕ್ಷತೆಗೆ ಆದ್ಯತೆ ನೀಡಬೇಕು ಎಂದು ಜೆಡಿಎಸ್ ಆಗ್ರಹ ಮಾಡಿದೆ.
ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮಗಳು ಮತ್ತು ಅಗತ್ಯ ವೈದ್ಯಕೀಯ ಸೌಲಭ್ಯಗಳನ್ನು ಹೆಚ್ಚಿಸುವ ತುರ್ತು ಅತ್ಯಗತ್ಯವಾಗಿದೆ ಎಂದು ಜೆಡಿಎಸ್ ತಿಳಿಸಿದೆ.