ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ.ದೇವೇಗೌಡ ಅವರು ದೂರದೃಷ್ಟಿಯಿಂದ ಬೆಂಗಳೂರು ನಗರಕ್ಕೆ ಮಾಹಿತಿ ತಂತ್ರಜ್ಞಾನದ ಅಡಿಪಾಯ ಹಾಕಿದರು ಎಂದು ಜೆಡಿಎಸ್ ಟ್ವೀಟ್ ಮಾಡಿ ತಿಳಿಸಿದೆ.
ಆ ನಂತರ ಬಂದ ಕರ್ನಾಟಕ ಸರಕಾರ ದೇವೇಗೌಡರ ದಿಸೆಯಿಂದ ಚಿನ್ನದ ಬೆಲೆ ಬಂದ ಭೂಮಿಯನ್ನು ಕೊಳ್ಳೆ ಹೊಡೆಯಲು ರಿಯಲ್ ಎಸ್ಟೇಟ್ ದಂಧೆಗೆ ನಾಂದಿ ಹಾಡಿತು.
ಆ ರಿಯಲ್ ಎಸ್ಟೇಟ್ ದಂಧೆಯ ರಕ್ಕಸ ರೂಪವೇ ಡೂಪ್ಲಿಕೇಟ್ ಸಿಎಂ ಬ್ರ್ಯಾಂಡ್ ಬೆಂಗಳೂರು!!
ಬ್ರ್ಯಾಂಡ್ ಬೆಂಗಳೂರು ಮುಳುಗುತ್ತಿದೆ! ಡೂಪ್ಲಿಕೇಟ್ ಸಿಎಂ ಫೋಟೋಶೂಟ್ ನಲ್ಲಿ ಬ್ಯುಸಿಯಾಗಿದ್ದಾರೆ!!
ರೋಮ್ ಹೊತ್ತಿ ಉರಿಯುತ್ತಿದ್ದರೆ ನೀರೋ ಪಿಟೀಲು ಬಾರಿಸುತ್ತಿದ್ದ!! ಎಂದು ಜೆಡಿಎಸ್ ವಾಗ್ದಾಳಿ ಮಾಡಿದೆ.