ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಹಿರಿಯೂರು ತಾಲೂಕಿನ ಗೊಲ್ಲಹಳ್ಳಿ ಗ್ರಾಮದ ಜೆಟ್ ಸಿಬಿಎಸ್ಇ ಶಾಲೆಯಲ್ಲಿ ನಾಡ ಹಬ್ಬ ದಸರಾ ಉತ್ಸವವನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಶಾಲೆಯ ವಿದ್ಯಾರ್ಥಿಗಳು ಪ್ರದರ್ಶಿಸಿದ ನವ ದುರ್ಗಿಯರ ನೃತ್ಯ ನೋಡುಗರ ಗಮನ ಸೆಳೆಯಿತು. ಗೊಂಬೆ ಪ್ರದರ್ಶನ ಏರ್ಪಡಿಸಲಾಗಿತ್ತು.
ಹಿರಿಯ ಪತ್ರಕರ್ತ ಹಾಗೂ ಜಾಗೃತಿ ಶಿಕ್ಷಣ ಸಂಸ್ಥೆ ಅಧ್ಯಕ್ಷ ಚಂದ್ರಶೇಖರ ಬೆಳಗೆರೆ ಮಾತನಾಡಿ ಕನ್ನಡ ನಾಡು ನುಡಿ ಸಂಸ್ಕೃತಿ ಬಿಂಬಿಸುವ ನಾಡ ಹಬ್ಬ ದಸರಾ ಮಕ್ಕಳ ಪಾಲಿಗೆ ಜ್ಞಾನದ ಬೆಳಕಾಗಿ ಹೊರ ಹೊಮ್ಮಲಿ ಎಂದು ಹೇಳಿದರು.
ನಾಡಿನ ಸಾಂಸ್ಕೃತಿಕ ಪ್ರಜ್ಞೆ ಮಕ್ಕಳಲ್ಲಿ ಚಿಗುರೋಡೆಯಲು ಇಂತಹ ಉತ್ಸವಗಳು ಅತ್ಯಗತ್ಯ ಎಂದು ಹೇಳಿದರು.
ಸಮಾಜ ಸೇವಕಿ ಶಶಿಕಲಾ ರವಿಶಂಕರ್ ಉದ್ಘಾಟಿಸಿ ಮಾತನಾಡಿ ಶಾಲೆಗಳಲ್ಲಿ ದಸರಾ ಹಬ್ಬಗಳನ್ನು ಆಚರಿಸುವುದರಿಂದ ಮುಂದಿನ ಪೀಳಿಗೆಗೆ ಸಾಂಸ್ಕೃತಿಕ ವಾರಸುದಾರರನ್ನಾಗಿ ರೂಪಿಸಬೇಕು ಎಂದು ಹೇಳಿದರು.
ಸಮಾಜ ಸೇವಕಿ ಲತಾ ರವೀಂದ್ರಪ್ಪ ಮುಖ್ಯ ಅತಿಥಿಗಳಾಗಿದ್ದರು.
ಜಾಗೃತಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಎನ್.ಗಿರಿಜಾ ಅಧ್ಯಕ್ಷತೆ ವಹಿಸಿದ್ದರು. ಪ್ರಾಂಶುಪಾಲ ಷಣ್ಮುಗ ಸುಂದರಂ ಸ್ವಾಗತಿಸಿದರು.