ಚಂದ್ರವಳ್ಳಿ ನ್ಯೂಸ್, ಬೆಂಗಳೂರು :
ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆ ಶಾಲಾ ಮಕ್ಕಳಿಗೆ ಅ. 3 ರಿಂದ 20 ತನಕ ದಸರಾ ರಜೆ ಘೋಷಿಸಿದ್ದು, ಇಡೀ ಕರ್ನಾಟಕದ ಶಾಲೆಗಳಿಗೆ ಒಂದೇ ಮಾರ್ಗದರ್ಶಿ ರೂಪಿಸಿದೆ. ಈ ಹಿಂದೆ ಕರಾವಳಿ ಭಾಗದಲ್ಲಿ ದಸರಾ ರಜೆಯಲ್ಲಿ ಕೊಂಚ ಮಾರ್ಪಾಡು ಆಗುತ್ತಿತ್ತು. ಆದ್ರೆ, ಈ ಬಾರಿ ಯಾವುದೇ ಮಾರ್ಪಾಡು ಆಗಿಲ್ಲ. ಇಡೀ ಕರ್ನಾಟಕದ ಎಲ್ಲಾ ಶಾಲೆಗಳಿಗೆ ಒಂದೇ ಮಾರ್ಗದರ್ಶಿ ರೂಪಿಸಲಾಗಿದೆ.
ಬರುವ ಅ. 3 ರಿಂದ 20ರ ತನಕ ಅಂದರೆ 17 ದಿನಗಳ ಕಾಲ ದಸರಾ ರಜೆ ಸಿಗಲಿದೆ. ಅ. 21ರಿಂದ 2ನೇ ಅವಧಿಯು ಪ್ರಾರಂಭವಾಗಲಿದ್ದು, 2025ರ ಏ.10 ತನಕ ನಡೆಯಲಿದೆ.
2024-2025ರ ಶೈಕ್ಷಣಿಕ ವರ್ಷದ ಶಾಲಾ ಅವಧಿಯ ಮಾರ್ಗದರ್ಶಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ, ಶಾಲೆಗಳು ಆರಂಭಕ್ಕೂ ಮುನ್ನ ಪ್ರಕಟಣೆ ಹೊರಡಿಸಿತ್ತು. ಅದರ ನಿಯಮಾನುಸಾರದಂತೆ ರಜೆಗಳು ಘೋಷಣೆಯಾಗಿವೆ. ಈಗ ದಸರಾ ರಜೆ ಹಿನ್ನೆಲೆಯಲ್ಲಿ ಅಕ್ಟೋಬರ್ ತಿಂಗಳಲ್ಲಿ ಕೇವಲ 11 ದಿನಗಳು ತರಗತಿಗಳು ನಡೆಯಲಿವೆ.