ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ದಸರಾ ಉದ್ಘಾಟನೆಯ ಬಾನು ಮುಷ್ತಾಕ್ ಪ್ರಕರಣ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಕೆಲವೇ ಕೆಲವು ದಿನಗಳು ಬಾಕಿ ಇರುವಂತ ಸಂದರ್ಭದಲ್ಲಿ ಮೈಸೂರಿನಲ್ಲಿ ಸಕಲ ಸಿದ್ಧತೆಗಳು ಸಹ ಜೋರಾಗಿ ನಡೆದಿವೆ.

ಮತ್ತೊಂದೆಡೆ ಬೂಕರ್ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಷ್ತಾಕ್ ದಸರಾ ಉದ್ಘಾಟಕರಾಗಿ ಆಯ್ಕೆಯಾಗಿರುವ ಮುಷ್ತಾಕ್ ವಿರುದ್ಧದ ಸಮರ ಮುಂದುವರೆದಿದೆ.

- Advertisement - 

ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಅವರನ್ನ ರಾಜ್ಯ ಸರ್ಕಾರ ಆಯ್ಕೆ ಮಾಡಿರುವುದನ್ನು ಪ್ರಶ್ನಿಸಿ ಕಾನೂನು ಹೋರಾಟ ನಡೆದಿದ್ದು, ಈಗಾಗಲೇ ಮಾಜಿ ಸಂಸದ ಪ್ರತಾಪ್ ಸಿಂಹ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದೆ.

ಇದರ ಬೆನ್ನಲ್ಲೇ ಇದೀಗ ಚಾಮುಂಡೇಶ್ವರಿ ಪೂಜೆ ಮಾಡಲು ಹಿಂದೂಯೇತರ ವ್ಯಕ್ತಿಗೆ ಆಹ್ವಾನ ನೀಡಲಾಗಿದೆ ಎಂದು ಬೆಂಗಳೂರು ನಿವಾಸಿ ಹೆಚ್.ಎಸ್.ಗೌರವ್ ಅವರು ಸುಪ್ರೀಂಕೋರ್ಟ್​ ಗೆ ಅರ್ಜಿ ಸಲ್ಲಿಸಿದ್ದಾರೆ.

- Advertisement - 

ಬಾನು ಮುಷ್ತಾಕ್ ವಿರುದ್ಧದ ಅರ್ಜಿಯನ್ನು ತುರ್ತು ವಿಚಾರಣೆಗೆ ಪಟ್ಟಿಮಾಡುವಂತೆ ವಕೀಲರು ಸುಪ್ರೀಂ ಕೋರ್ಟ್ ನ ಸಿಜೆಐ ಪೀಠಕ್ಕೆ ಮನವಿ ಮಾಡಿದ್ದು, ಇದನ್ನು ತುರ್ತಾಗಿ ಪಟ್ಟಿ ಮಾಡಲು ಸಿಜೆಐ ಬಿ.ಆರ್. ಗವಾಯಿ ಒಪ್ಪಿಗೆ ಸೂಚಿಸಿದ್ದಾರೆ.

 

 

 

Share This Article
error: Content is protected !!
";