ಸೆ.21, 22 ರಂದು ದಸರಾ ಕ್ರೀಡಾ ಕೂಟ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಕ್ರೀಡಾ ಪ್ರಾಧಿಕಾರ, ಶಾಲಾ ಶಿಕ್ಷಣ ಇಲಾಖೆ, ತಾಲ್ಲೂಕು ಪಂಚಾಯತ್‍ಗಳ ಮತ್ತು ವಿವಿಧ ಕ್ರೀಡಾ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಇದೇ ಸೆ.21, 22 ರಂದು 2024-25ನೇ ಸಾಲಿನ ತಾಲ್ಲೂಕು ಮಟ್ಟದ ದಸರಾ ಕ್ರೀಡಾ ಕೂಟವನ್ನು ಆಯೋಜಿಸಲಾಗಿದೆ.

       ಸೆ.21 ರಂದು ಬೆಳಿಗ್ಗೆ 9 ಗಂಟೆಗೆ ಹೊಸದುರ್ಗ ತಾಲ್ಲೂಕು ಕ್ರೀಡಾ ಕೂಟದಲ್ಲಿ  ಕ್ರೀಡಾಂಗಣದಲ್ಲಿ ಅಥ್ಲೆಟಿಕ್ಸ್, ವಾಲಿಬಾಲ್, ಖೋಖೋ, ಕಬಡ್ಡಿ, ಫುಟ್‍ಬಾಲ್, ಥ್ರೋಬಾಲ್, ಯೋಗ ಕ್ರೀಡೆಗಳನ್ನು ಆಯೋಜಿಸಲಾಗಿದೆ.

       ಸೆ.22ರಂದು ಬೆಳಿಗ್ಗೆ 9 ಗಂಟೆಗೆ ಹಿರಿಯೂರು ತಾಲ್ಲೂಕು ಕ್ರೀಡಾಂಗಣದಲ್ಲಿ ಅಥ್ಲೆಟಿಕ್ಸ್, ವಾಲಿಬಾಲ್, ಫುಟ್‍ಬಾಲ್, ಥ್ರೋಬಾಲ್, ಯೋಗ ಮತ್ತು ನೆಹರೂ ಕ್ರೀಡಾಂಗಣದಲ್ಲಿ ಖೋಖೋ, ಕಬಡ್ಡಿ ಕ್ರೀಡೆ ಹಾಗೂ ಹೊಳಲ್ಕೆರೆ ತಾಲ್ಲೂಕಿನ ರಾಮಗಿರಿ ಎಸ್.ಜೆ.ಎಂ ಪ್ರೌಢಶಾಲೆ, ಮೊಳಕಾಲ್ಮೂರು ತಾಲ್ಲೂಕಿನ ಕೊಂಡ್ಲಹಳ್ಳಿ ಗ್ರಾಮಾಂತರ ಪ್ರೌಢಶಾಲೆ, ಚಳ್ಳಕೆರೆ ತಾಲ್ಲೂಕಿನ ಪರಶುರಾಂಪುರ ಕರ್ನಾಟಕ ಪಬ್ಲಿಕ್ ಶಾಲೆ, ಚಿತ್ರದುರ್ಗ ತಾಲ್ಲೂಕಿನ ಜಿಲ್ಲಾ ಕ್ರೀಡಾಂಗಣ ಆವರಣದಲ್ಲಿ ಅಥ್ಲೆಟಿಕ್ಸ್, ವಾಲಿಬಾಲ್, ಖೋಖೋ, ಕಬಡ್ಡಿ, ಫುಟ್‍ಬಾಲ್, ಥ್ರೋಬಾಲ್, ಯೋಗ ಕ್ರೀಡೆಗಳನ್ನು ಆಯೋಜಿಸಲಾಗಿದೆ.

       ದಸರಾ ಕ್ರೀಡಾ ಕೂಟದಲ್ಲಿ ಎಲ್ಲಾ ವಯೋಮಾನದವರು ಭಾಗವಹಿಸಬಹುದು. ತಾಲ್ಲೂಕು ಮಟ್ಟದ ಅಥ್ಲೆಟಿಕ್ಸ್  ಕ್ರೀಡಾಕೂಟದಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನಪಡೆದವರು ಹಾಗೂ ಗುಂಪು ಆಟಗಳಲ್ಲಿ ಪ್ರಥಮ ಸ್ಥಾನ ಪಡೆದವರು ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಲು ಅರ್ಹರಾಗಿರುತ್ತಾರೆ.

       ಹೆಚ್ಚಿನ ಮಾಹಿತಿಗಾಗಿ ಹೊಸದುರ್ಗ ವಿ.ಹನುಮಂತಪ್ಪ-99001623062, ಹಿರಿಯೂರು ಶಿವಪ್ರಸಾದ್-9986615315, ಬಾಲಾಜಿ-87460264439, ಹೊಳಲ್ಕೆರೆ ರುದ್ರೇಶ್- 9901669702, ಮೊಳಕಾಲ್ಮೂರು-9916061416, ಚಳ್ಳಕೆರೆ ತಿಪ್ಪೇಸ್ವಾಮಿ-9611344434, ಚಿತ್ರದುರ್ಗ ಮಹಮ್ಮದ್ ಮುಹೀಬುಲ್ಲಾ-9611673475 ಹಾಗೂ ಕಚೇರಿಯ ದೂರವಾಣಿ ಸಂಖ್ಯೆ-08194-235635 ಗೆ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೆಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

 

 

- Advertisement -  - Advertisement -  - Advertisement - 
Share This Article
error: Content is protected !!
";