ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಾರಿಗೆ, ಗೃಹ ಹಾಗೂ ಆರೋಗ್ಯ ಇಲಾಖೆಯ ಸಹಯೋಗದಲ್ಲಿ ನಡೆದ ‘ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚಾರಣೆ-2026’ರ ಸಮಾರೋಪ ಮತ್ತು ‘ಇ-ಡಾರ್’ ಯೋಜನೆಯ ಅನುಷ್ಠಾನ ಸಮಾರಂಭದಲ್ಲಿ ಸಾರಿಗೆ ಸಚಿವ ಆರ್.ರಾಮಲಿಂಗಾರೆಡ್ಡಿ ಭಾಗವಹಿಸಿದ್ದರು.
ರಸ್ತೆ ಅಪಘಾತಗಳಲ್ಲಿ ನೊಂದ ಕುಟುಂಬಗಳು ಇನ್ಶುರೆನ್ಸ್ (ವಿಮೆ) ಹಣ ಪಡೆಯಲು ಹರಸಾಹಸ ಪಡುವುದನ್ನು ತಪ್ಪಿಸಲು ಇದೊಂದು ಶಾಶ್ವತ ಪರಿಹಾರವಾಗಿದೆ.
ಇನ್ನು ಮುಂದೆ ಪೊಲೀಸ್, ಸಾರಿಗೆ ಮತ್ತು ಆರೋಗ್ಯ ಇಲಾಖೆಯ ಮಾಹಿತಿಗಳು ಒಂದೇ ಡಿಜಿಟಲ್ ವೇದಿಕೆಯಲ್ಲಿ ಸಿಗಲಿವೆ. ಇದರಿಂದ ವಿಮಾ ಕಂಪನಿಗಳು ತ್ವರಿತವಾಗಿ ಪರಿಹಾರ ನೀಡಲು ಸಾಧ್ಯವಾಗುತ್ತದೆ.
ಇದೇ ವೇಳೆ, ಮಹಿಳೆಯರು ಮತ್ತು ಪ್ರಯಾಣಿಕರ ಸುರಕ್ಷತೆಗಾಗಿ ‘ಆಟೋ ಚಾಲಕರ ಡಿಸ್ಪ್ಲೇ ಕಾರ್ಡ್’ ಗಳನ್ನು ಸಹ ಬಿಡುಗಡೆ ಮಾಡಲಾಯಿತು ಎಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದರು.
ಈ ಕಾರ್ಯಕ್ರಮದಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ. ಎಂ.ಎ.ಸಲೀಂ, ಬಿಎಂಆರ್ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಮಹೇಶ್ವರ್ ರಾವ್, ಸಾರಿಗೆ ಆಯುಕ್ತ ಯೋಗೇಶ್ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.

