ಪಿ.ಎಂ ಕಿಸಾನ್ ಸಮ್ಮಾನ್ ಯೋಜನೆ ಸಹಾಯಧನಕ್ಕೆ ಇ-ಕೆವೈಸಿ ಕಡ್ದಾಯ

News Desk

ಚಂದ್ರವಳ್ಳಿ ನ್ಯೂಸ್, ಬೆಂ.ಗ್ರಾ.ಜಿಲ್ಲೆ:
ಸಣ್ಣ ಹಿಡುವಳಿ ಜಮೀನು ಹೊಂದಿರುವ ರೈತರಿಗೆ ನೆರವಾಗುವ ಸಲುವಾಗಿ ಕೇಂದ್ರ ಸರ್ಕಾರವು ಕಿಸಾನ್ ಸಮ್ಮಾನ್ ಯೋಜನೆ ಅಡಿ ವಾರ್ಷಿಕ  
6 ಸಾವಿರ ಸಹಾಯಧನವನ್ನು ನೀಡುತ್ತ ಬಂದಿದೆ.

- Advertisement - 

ತಲಾ 2 ಸಾವಿರದಂತೆ ಮೂರು ಕಂತಿನಲ್ಲಿ ರೈತರ ಬ್ಯಾಂಕ್ ಖಾತೆಗೆ ನೇರವಾಗಿ ಹಣ ಸಂದಾಯ ಆಗುತ್ತಿದೆ. ಈ ಯೋಜನೆಯ ಫಲಾನುಭವಿ ರೈತರು ಆಗಾಗೆ ತಮ್ಮ ಬ್ಯಾಂಕ್ ಖಾತೆಗಳಿಗೆ ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ.

- Advertisement - 

ಜಿಲ್ಲೆಯಲ್ಲಿ ಒಟ್ಟು 11635 ಸಾವಿರ ರೈತರು ಇ-ಕೆವೈಸಿ ಬಾಕಿ ಉಳಿಸಿಕೊಂಡಿದ್ದು ರೈತರು ತಮ್ಮ ಆಧಾರ್ ಕಾರ್ಡ್ ಗೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆಯೊಂದಿಗೆ ತಮ್ಮ ಬ್ಯಾಂಕ್ ಸಮೀಪದ ಸಾಮಾನ್ಯ ಸೇವಾ ಕೇಂದ್ರಗಳು ಇಲ್ಲವೇ ಗ್ರಾಮ ಒನ್ ಕೇಂದ್ರಗಳ ಮೂಲಕ ಇ-ಕೆವೈಸಿ ಮಾಡಿಸಬೇಕು.

ಹೆಚ್ಚಿನ ಮಾಹಿತಿಗಾಗಿ ರೈತರು ತಮ್ಮ ಸಮೀಪದ ರೈತ ಸಂಪರ್ಕ ಕೇಂದ್ರಗಳ ಅಧಿಕಾರಿಗಳಿಂದ ಮಾಹಿತಿ ಪಡೆಯಬಹುದು ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕಿ ಕಲಾವತಿ ಬಿ.ಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement - 

 

Share This Article
error: Content is protected !!
";