ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್)ಯ ಆಡಳಿತ ನಿರ್ದೇಶಕಿ ಕ್ರಿಸ್ಟಾಲಿನಾ ಗಿಯೊರ್ಗಿವಾ ಅವರು ಭಾರತದ ಆರ್ಥಿಕತೆ 2025ರಲ್ಲಿ ಮತ್ತಷ್ಟು ದುರ್ಬಲವಾಗಲಿದೆ ಎಂಬ ಆಘಾತಕಾರಿ ವಿಷಯ ಹೊರ ಹಾಕಿದ್ದಾರೆ ಎಂದು ಕಾಂಗ್ರೆಸ್ ಆತಂಕ ವ್ಯಕ್ತಪಡಿಸಿ ಕೇಂದ್ರ ಸರ್ಕಾರದ ನೇತೃತ್ವ ವಹಿಸಿರುವ ಬಿಜೆಪಿ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.
2025ಕ್ಕೆ ಭಾರತದ ಆರ್ಥಿಕತೆ 5 ಟ್ರಿಲಿಯನ್ ಡಾಲರ್ ತಲುಪಲಿದೆ ಎಂಬ ಮೋದಿ ಸರ್ಕಾರದ ಘೋಷಣೆ ಅವರ ಸುಳ್ಳುಗಳ (ಜುಮ್ಲಾ) ಖಾತೆಗೆ ಮತ್ತೊಂದು ಸೇರ್ಪಡೆಯಷ್ಟೆ! ಎಂದು ಕಾಂಗ್ರೆಸ್ ವ್ಯಂಗ್ಯವಾಡಿದೆ.
ರೂಪಾಯಿ ಅಪಮೌಲ್ಯ, ಜಿಡಿಪಿ ಕುಸಿತ, ಬೆಲೆ ಏರಿಕೆ, ಅವೈಜ್ಞಾನಿಕ ನೀತಿಗಳಿಂದಾಗಿ ದೇಶದ ಆರ್ಥಿಕ ಪ್ರಗತಿ ಹಳಿತಪ್ಪಿದೆ! ಎಂದು ಮೋದಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ಮಾಡಿದೆ.