ಇಡಿ ಎಲ್ಲಾ ಮಿತಿಗಳನ್ನು ಮೀರಿದೆ-ಸುಪ್ರೀಂ

News Desk

ಚಂದ್ರವಳ್ಳಿ ನ್ಯೂಸ್, ನವದೆಹಲಿ:
ಜಾರಿ ನಿರ್ದೇಶನಾಲಯ(ಇಡಿ)ವು ತಮಿಳುನಾಡು ಸರ್ಕಾರ ಸ್ವಾಮ್ಯದ ಮದ್ಯ ಚಿಲ್ಲರೆ ಉದ್ಯಮ ಟ್ಯಾಸ್ಮ್ಯಾಕ್ ವಿರುದ್ಧ ನಡೆಸುತ್ತಿದ್ದ ಹಣ ಅಕ್ರಮ ವರ್ಗಾವಣೆ ತನಿಖೆಗೆ ಸುಪ್ರೀಂ ಕೋರ್ಟ್ ಗುರುವಾರ ತಡೆ ನೀಡಿದ್ದು
, ಪ್ರಕರಣದ ವಿಚಾರಣೆ ಸಂದರ್ಭದಲ್ಲಿ ತನಿಖಾ ಸಂಸ್ಥೆ ಎಲ್ಲಾ ಮಿತಿಗಳನ್ನು ಮೀರಿದೆ ಎಂದು ಛೀಮಾರಿ ಹಾಕಿದೆ.

- Advertisement - 

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾದ ಬಿ ಆರ್ ಗವಾಯಿ ಮತ್ತು ನ್ಯಾಯಮೂರ್ತಿ ಆಗಸ್ಟೀನ್ ಜಾರ್ಜ್ ಮಸಿಹ್ ಅವರನ್ನೊಳಗೊಂಡ ನ್ಯಾಯಪೀಠವು ಸರ್ಕಾರಿ ಸ್ವಾಮ್ಯದ ಸಂಸ್ಥೆಯ ವಿರುದ್ಧ ಕ್ರಮ ಕೈಗೊಂಡು ನಂತರ ದಾಳಿ ಆರಂಭಿಸಿದ ಜಾರಿ ನಿರ್ದೇಶನಾಲಯ ಕ್ರಮವನ್ನು ತೀವ್ರವಾಗಿ ಖಂಡಿಸಿತು.

- Advertisement - 

ತಮಿಳುನಾಡು ಸರ್ಕಾರ ಮತ್ತು ತಮಿಳುನಾಡು ರಾಜ್ಯ ಮಾರ್ಕೆಟಿಂಗ್ ಕಾರ್ಪೊರೇಷನ್ (TASMAC) ಸಂಸ್ಥೆಯು ಇತ್ತೀಚಿನ ಇಡಿ ದಾಳಿಗಳನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಗಳ ಮೇರೆಗೆ ನ್ಯಾಯಪೀಠವು ಇಡಿಗೆ ನೋಟಿಸ್ ನೀಡಿ ನಿರ್ದಿಷ್ಟ ದಿನಾಂಕ ನಿಗದಿಪಡಿಸದೆ ರಜೆಯ ನಂತರ ಮುಂದಿನ ವಿಚಾರಣೆಗೆ ನಿಗದಿಪಡಿಸಿತು.
ದೇಶದ ಫೆಡರಲ್ ರಚನೆಯನ್ನು ಇಡಿಯ ಕ್ರಮಗಳು ಉಲ್ಲಂಘಿಸಿವೆ ಎಂದು ಸುಪ್ರೀಂ ಕೋರ್ಟ್ ಗಮನಿಸಿದೆ
, TASMAC ವಿರುದ್ಧದ ತನಿಖೆ ನಡೆಸುವುದಿಲ್ಲ ಎಂದು ಹೇಳಿದೆ.

2014 ರಿಂದ ಮದ್ಯದಂಗಡಿ ಪರವಾನಗಿಗಳ ಹಂಚಿಕೆಗೆ ಸಂಬಂಧಿಸಿದ ಪ್ರಕರಣಗಳಲ್ಲಿ ರಾಜ್ಯವು 40 ಕ್ಕೂ ಹೆಚ್ಚು ಎಫ್‌ಐಆರ್‌ಗಳನ್ನು ದಾಖಲಿಸಿದೆ. ತಸ್ಮಾಕ್ ಪ್ರಧಾನ ಕಚೇರಿಯ ಮೇಲೆ ದಾಳಿ ಮಾಡಿ ವ್ಯವಸ್ಥಾಪಕ ನಿರ್ದೇಶಕರನ್ನು ವಶಕ್ಕೆ ಪಡೆದಿದೆ ಎಂದು ಹಿರಿಯ ವಕೀಲ ಕಪಿಲ್ ಸಿಬಲ್ ಮತ್ತು ಅಮಿತ್ ನಂದ್ ತಿವಾರಿ ಅವರು ಸಲ್ಲಿಸಿದ ಅರ್ಜಿಗಳನ್ನು ಪೀಠವು ಗಮನಿಸಿತು.

- Advertisement - 

ಏಪ್ರಿಲ್ 6 ಮತ್ತು 8 ರ ನಡುವೆ TASMAC ಪ್ರಧಾನ ಕಚೇರಿ ಸೇರಿದಂತೆ ಇಡಿ ದಾಳಿಗಳ ವಿರುದ್ಧದ ತನ್ನ ಮತ್ತು ಟಾಸ್ಮಾಕ್ ಅರ್ಜಿಗಳನ್ನು ವಜಾಗೊಳಿಸಿದ ಮದ್ರಾಸ್ ಹೈಕೋರ್ಟ್‌ನ ಏಪ್ರಿಲ್ 23 ರ ಆದೇಶವನ್ನು ಪ್ರಶ್ನಿಸಿ ತಮಿಳುನಾಡು ಸರ್ಕಾರ ಸಲ್ಲಿಸಿದ ಅರ್ಜಿಯನ್ನು ಆಲಿಸಿದ ನಂತರ ಸುಪ್ರೀಂ ಕೋರ್ಟ್ ಕಟುವಾಗಿ ಟೀಕಿಸಿದೆ.

Share This Article
error: Content is protected !!
";