ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಸಾರ್ವಜನಿಕ ಶಿಕ್ಷಣ ಉಳಿವಿಗಾಗಿ, ಹಾಸ್ಟೆಲ್ ಬಲವರ್ಧನೆಗಾಗಿ ರಾಜ್ಯಾವ್ಯಾಪಿ ಸಂಚರಿಸುವ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ಶೈಕ್ಷಣಿಕ ಜಾಥಾವು ಚಿತ್ರದುರ್ಗಕ್ಕೆ ತಲುಪಿತ್ತು. ಸರ್ಕಾರಿ ವಿಜ್ಞಾನ ಕಾಲೇಜ್ ಆವರಣದಲ್ಲಿ ವಿದ್ಯಾರ್ಥಿಗಳ ಸ್ವಾಗತಿಸಿ, ಬಹಿರಂಗ ಸಭೆ ನಡೆಸಿದರು.
ಬಹಿರಂಗ ಸಭೆಯನ್ನು ಉದ್ದೇಶಿಸಿ ಸಿಐಟಿಯು ಮುಖಂಡ ಕಾಮ್ರೇಡ್ ಮಲಿಯಪ್ಪ ಮಾತನಾಡಿ, ವಿದ್ಯಾರ್ಥಿಗಳು ಐಕ್ಯತೆಯಿಂದ ಶಿಕ್ಷಣದ ಉಳಿವಿಗಾಗಿ ಹೋರಾಟ ನಡೆಸಬೇಕು. ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಬಾಕಿ ಇರುವ ಕಟ್ಟಡ ಕಾರ್ಮಿಕ ಮಕ್ಕಳಿಗೆ ನೀಡುವ ವಿದ್ಯಾರ್ಥಿ ವೇತನವನ್ನು ಮೂರು ವರ್ಷಗಳಿಂದ ಕೊಡದೇ ರಾಜ್ಯ ಸರ್ಕಾರ ಸತ್ತಾಯಿಸುತಿರುವುದು ಸರಿಯಲ್ಲ ಕೂಡಲೇ ಬಿಡುಗಡೆ ಮಾಡಬೇಕು.
ಹಾಸ್ಟೆಲ್ ವಿದ್ಯಾರ್ಥಿಗಳ ಪರಿಸ್ಥಿತಿ ಶೋಚನೀಯವಾಗಿದೆ ಸರ್ಕಾರಗಳ ನಿರ್ಲಕ್ಷ್ಯದಿಂದ ಜೈಲಿನ ಕೈದಿಗಳಿಗೆ ಇರುವ ಕನಿಷ್ಠ ಸೌಲಭ್ಯಗಳು ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಸಿಗುತ್ತಿಲ್ಲ. ಕಾರ್ಮಿಕ, ಬಡವರ, ರೈತರ, ಶೋಷಣೆ ಸಮುದಾಯದ ಮಕ್ಕಳ ಶಿಕ್ಷಣಕ್ಕಾಗಿ ಹೋರಾಡುವ ಎಸ್ಎಫ್ಐ ಶೈಕ್ಷಣಿಕ ಇಡೀ ರಾಜ್ಯಾವ್ಯಾಪಿ ಸಂಚಾರಿಸಿ ವಿದ್ಯಾರ್ಥಿ ಸಮುದಾಯವನ್ನು ಜಾಗೃತಿಗೊಳಿಸುತ್ತಿರುವುದು ಶ್ಲಾಘನೀಯ. ವಿದ್ಯಾರ್ಥಿಗಳ ಐಕ್ಯತೆ ಚಳುವಳಿ ಜಾಥಾ ಯಶಸ್ವಿಯಾಗಲಿ ಎಂದು ಶುಭಕೋರಿ ಮಾತನಾಡಿದರು.
ಎಸ್ಎಫ್ಐ ರಾಜ್ಯ ಉಪಾಧ್ಯಕ್ಷ ಬಸವರಾಜ ಎಸ್ ಮಾತನಾಡಿ, ಸಾರ್ವಜನಿಕ ಶಿಕ್ಷಣ ಉಳಿವಿಗಾಗಿ, ಹಾಸ್ಟೆಲ್ ಬಲವರ್ಧನೆಗಾಗಿ ಎಸ್ಎಫ್ಐ ರಾಜ್ಯಾವ್ಯಾಪಿ ಎಸ್ಎಫ್ಐ ಶೈಕ್ಷಣಿಕ ಜಾಥಾ ದಾವಣಗೆರೆಯಿಂದ ಉದ್ಘಾಟನೆಗೊಂಡ ಚಿತ್ರದುರ್ಗದ ಮೂಲಕ ಇಡೀ ರಾಜ್ಯದ ವಿವಿಧ ಜಿಲ್ಲೆ, ತಾಲ್ಲೂಕುಗಳಿಗೆ ಸಂಚಾರಿಸಿ 29 ಅಕ್ಟೋಬರ್ 2025 ರಂದು ಹಾವೇರಿಯಲ್ಲಿ ನಡೆಯುವ ಹಾಸ್ಟೆಲ್ ವಿದ್ಯಾರ್ಥಿಗಳ ರಾಜ್ಯ ಸಮಾವೇಶ ತಲುಪಲ್ಲಿದೆ.
ಇದರ ಉದ್ದೇಶ ಈಗಾಗಲೇ ರಾಜ್ಯದಲ್ಲಿರುವ ಎಸ್ಸಿ 3.5ಲಕ್ಷ ವಿದ್ಯಾರ್ಥಿಗಳು ಪೈಕಿ 2400 ವಸತಿ ನಿಲಯಗಳು, ಎಸ್.ಟಿ 1.5ಲಕ್ಷ ವಿದ್ಯಾರ್ಥಿಗಳು ಪೈಕಿ 1200 ವಸತಿ ನಿಲಯಗಳು, ಒಬಿಸಿ 2.5 ವಿದ್ಯಾರ್ಥಿಗಳು ಪೈಕಿ 2500 ನಿಲಯಗಳು ಒಟ್ಟು 7.5 ವಿದ್ಯಾರ್ಥಿಗಳು ಮತ್ತು 6000ಕ್ಕೂ ಅಧಿಕ ನಿಲಯಗಳಿವೆ. ನಿಲಯಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ಸಾಧ್ಯವಾಗುತ್ತಿಲ್ಲ.
ನೇಮಕಾತಿಗಳು ವಿಳಂಬದ ಕಾರಣದಿಂದಾಗಿ ನಿಲಯ ಪಾಲಕರ, ಸ್ವಚ್ಚತಾ ಸಿಬ್ಬಂದಿ ಕೊರತೆ ಹೆಚ್ಚಿದೆ. ಟೆಂಡರ್ ಗಳ ಮೂಲಕ ಆಹಾರ ಸರಬರಾಜು ಮಾಡಲಾಗುತ್ತಿದೆ. ವಿದ್ಯಾರ್ಥಿಗಳನ್ನು ಜೈಲಿನಲ್ಲಿರುವ ಕೈದಿಗಳಿಗಿಂತ ಕಡೆಯಾಗಿ ಕಾಣಲಾಗುತ್ತದೆ. ರಾಜ್ಯ ಸರ್ಕಾರಕ್ಕೆ ಸಮಾಜ ಕಲ್ಯಾಣ ಇಲಾಖೆ 14 ಕೋಟಿ ಹಣ ಕೇಳಿದೆ ಆದರೆ ಸರ್ಕಾರ ನೀಡುತ್ತಿಲ್ಲ. ಅದಕ್ಕಾಗಿ ಎಸ್ಎಫ್ಐ ತೀವ್ರ ವಿರೋಧವನ್ನು ವ್ಯಕ್ತಪಡಿಸಿದೆ.
ಮೆಟ್ರಿಕ್ ವಿದ್ಯಾರ್ಥಿಗಳಿಗೆ 1750 ರೂ ಮತ್ತು ಪೋಸ್ಟ್ ಮೆಟ್ರಿಕ್ ವಿದ್ಯಾರ್ಥಿಗಳಿಗೆ 1850 ರೂ ಆಹಾರ ಭತ್ಯೆಯನ್ನು ನೀಡಲಾಗುತ್ತಿದೆ. ಇದರಿಂದ ಉತ್ತಮ ಗುಣಮಟ್ಟದ ಪೌಷ್ಟಿಕ ಆಹಾರ ಕೊಡಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಸರ್ಕಾರ ಪ್ರತಿ ವಿದ್ಯಾರ್ಥಿಗೆ 4.500ರೂ ಆಹಾರ ಭತ್ಯಯನ್ನು ಹೆಚ್ಚಿಸಬೇಕು. ಇದರ ಭಾಗವಾಗಿ ಹಾವೇರಿಯಲ್ಲಿ ಎರಡು ದಿನಗಳ ಕಾಲ ರಾಜ್ಯಮಟ್ಟದ ಸಮಾವೇಶವನ್ನು ಮಾಡಿ ಸರ್ಕಾರಕ್ಕೆ ಮನವರಿಕೆ ಮಾಡಿಕೊಡಲು ಮುಂದಾಗಿದೆ ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳ ಮಧ್ಯೆ ವಿದ್ಯಾರ್ಥಿ ಚಳುವಳಿ ದೊಡ್ಡ ಶಕ್ತಿಯನ್ನು ಈ ಆಂದೋಲನದ ಮೂಲಕ ಜಾಥಾ ನಡೆಸಲಾಗುತ್ತದೆ ಎಂದರು.
ರಾಜ್ಯ ಉಪಾಧ್ಯಕ್ಷ ಕಾಮ್ರೇಡ್ ಗಣೇಶ ರಾಠೋಡ್ ಮಾತನಾಡಿ, ದೇಶದ ಶಿಕ್ಷಣ ವ್ಯವಸ್ಥೆಯನ್ನು ಕಾರ್ಪೊರೇಟ್ ಕಂಪನಿಗಳ ಕೈಗೆ ಕೊಟ್ಟಿರುವುದನ್ನು ವಿರೋಧಿಸಿ ಸರ್ಕಾರದ ವಿರುದ್ಧ ಶೈಕ್ಷಣಿಕ ಜಾಥಾ ನಡೆಯಲಿದೆ. ಶೈಕ್ಷಣಿಕ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ. ಇದರ ವಿರುದ್ಧ ವಿದ್ಯಾರ್ಥಿಗಳು ಎಚ್ಚರಗೊಳ್ಳಬೇಕಿದೆ ಇಲ್ಲದಿದ್ದರೆ ನಮ್ಮನ್ನು ಗುಲಾಮರನ್ನಾಗಿ ಮಾಡುತ್ತಾರೆ. ಹಗಲು ದರೋಡೆ ಮಾಡುವವರ ಬಗ್ಗೆ ಎಚ್ಚರಿಕೆಯಿಂದರಬೇಕು ಎಂದರು.
ಈ ಸಂದರ್ಭದಲ್ಲಿ ರಾಜ್ಯ ಉಪಾಧ್ಯಕ್ಷ ಗ್ಯಾನೇಶ್ ಕಡಗದ, ಬಸವರಾಜ ಗುಳೆದಾಳು, ರಾಜ್ಯ ಪದಾಧಿಕಾರಿ ಚಂದ್ರ ರಾಠೋಡ್, ಮುಖಂಡರಾದ ಸಂಜುನಾಯ್ಕ ಎಲ್ ಜಿ, ನಾಗರತ್ನ, ಭಾಗ್ಯಲಕ್ಷ್ಮಿ, ನಾಗರಾಜ ಕೆ, ಭರತ್ ಐ ಎನ್, ಸಂಗಮೇಶ ದೊಡ್ಡಮನಿ ಸೇರಿದಂತೆ ಅನೇಕ ವಿದ್ಯಾರ್ಥಿಗಳ ಪಾಲ್ಗೊಂಡಿದ್ದರು. ಮುಖಂಡರಾದ ಅನಂತರಾಜ್ ಬಿ ಎಮ್ ಸ್ವಾಗತಿಸಿ ನಿರೂಪಿಸಿದರು.

