ಕಟ್ಟಡ ಕಾರ್ಮಿಕರ ಮಕ್ಕಳಿಗೆ ಸ್ನಾತಕೋತ್ತರ ಪದವಿಯವರೆಗೆ ಶೈಕ್ಷಣಿಕ ಸಹಾಯಧನ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯು ನೋಂದಾಯಿತ ಕಾರ್ಮಿಕರ ಮಕ್ಕಳ ಉನ್ನತ ಶಿಕ್ಷಣಕ್ಕಾಗಿ ಹೊಸ ಸೌಲಭ್ಯವನ್ನು ಘೋಷಿಸಿದೆ.

ಈ ಹಿಂದೆ ಮಂಡಳಿಯ ನೋಂದಾಯಿತ ಫಲಾನುಭವಿಗಳು ಮರಣ ಹೊಂದಿದ ಸಂದರ್ಭದಲ್ಲಿ ಅರ್ಹತೆಯ ಆಧಾರದ ಮೇಲೆ ಕೇವಲ ಪೆನ್ಷನ್ ಸೌಲಭ್ಯವನ್ನು ಮಾತ್ರ ನೀಡಲಾಗುತ್ತಿತ್ತು. ಆದರೆ, ಆರ್ಥಿಕವಾಗಿ ಹಿಂದುಳಿದ ಕಾರ್ಮಿಕರ ಕುಟುಂಬದ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಮಂಡಳಿಯು ತಿದ್ದುಪಡಿ ತಂದಿದೆ.

- Advertisement - 

ನೋಂದಾಯಿತ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರು ಕೆಲಸದ ಸ್ಥಳದಲ್ಲಿ ಅಪಘಾತದಿಂದ ಮೃತಪಟ್ಟಲ್ಲಿ, ಅವರ ಇಬ್ಬರು ಮಕ್ಕಳಿಗೆ ಸ್ನಾತಕೋತ್ತರ ಪದವಿಯವರೆಗೆ ಶೈಕ್ಷಣಿಕ ಸಹಾಯಧನವನ್ನು ನೀಡಲು ಮಂಡಳಿಯು ಅನುಮೋದನೆ ನೀಡಿದೆ. ಈ ಸೌಲಭ್ಯವು ಶೈಕ್ಷಣಿಕ ವರ್ಷ 2025-26 ರಿಂದ ಜಾರಿಗೆ ಬರಲಿದೆ. ಕಾರ್ಮಿಕರ ಕುಟುಂಬದ ಶೈಕ್ಷಣಿಕ ಅಭಿವೃದ್ಧಿಯೇ ಈ ಯೋಜನೆಯ ಮುಖ್ಯ ಗುರಿಯಾಗಿದೆ.

ಹೆಚ್ಚಿನ ಮಾಹಿತಿಗಾಗಿ ಅಥವಾ ಅರ್ಜಿ ಸಲ್ಲಿಕೆಗಾಗಿ ಮಂಡಳಿಯ ಅಧಿಕೃತ ವೆಬ್‍ಸೈಟ್ ಸಂಪರ್ಕಿಸಬಹುದು ಎಂದು ಮಂಡಳಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಮತ್ತು ಕಾರ್ಯದರ್ಶಿಗಳು ತಿಳಿಸಿದ್ದಾರೆ.

- Advertisement - 

 

Share This Article
error: Content is protected !!
";