ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿರುವ ಕೆಂಪೇಗೌಡರ ಪುತ್ಥಳಿ, ಗುಜರಾತ್ ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಬೃಹತ್ ಪ್ರತಿಮೆ ಸೇರಿದಂತೆ ಅನೇಕ ಐತಿಹಾಸಿಕ ಪುತ್ಥಳಿಗಳಿಗೆ ರೂಪ ನೀಡಿದ ಶತಾಯುಷಿ ಶಿಲ್ಪಿ, ಪದ್ಮಶ್ರೀ, ಪದ್ಮಭೂಷಣ ಪುರಸ್ಕೃತ ರಾಮ್ ಸುತಾರ್ ಅವರ ನಿಧನದ ಸುದ್ದಿ ಅತ್ಯಂತ ದುಃಖ ತಂದಿದೆ ಎಂದು ಬೃಹತ್ ಕೈಗಾರಿಕೆ ಸಚಿವ ಎಂ.ಬಿ ಪಾಟೀಲ್ ಸಂತಾಪ ಸೂಚಿಸಿದ್ದಾರೆ.
ದೆಹಲಿಯ ಸಂಸತ್ ಭವನದಲ್ಲಿರುವ ಬಾಪೂಜಿ ಸೇರಿದಂತೆ ವಿಶ್ವವೇ ಬೆರಗುಗೊಳ್ಳುವಂತಹ ಶಿಲ್ಪಕೃತಿಗಳನ್ನು ಸೃಷ್ಟಿಸಿದ ಅವರು ಭಾರತೀಯ ಶಿಲ್ಪಕಲೆಗೆ ಅನನ್ಯ ಕೊಡುಗೆ ನೀಡಿದ್ದಾರೆ.
ಅವರ ಆತ್ಮಕ್ಕೆ ಶಾಂತಿ ಕೋರುತ್ತಾ, ಕುಟುಂಬದ ಸದಸ್ಯರು ಹಾಗೂ ಅಭಿಮಾನಿಗಳಿಗೆ ಈ ದುಃಖ ಸಹಿಸುವ ಶಕ್ತಿ ದೊರಕಲಿ ಎಂದು ಸಚಿವರು ಪ್ರಾರ್ಥಿಸಿದ್ದಾರೆ.

