ವಿದ್ಯಾರ್ಥಿವೇತನಕ್ಕೆ ಇ-ಕೆವೈಸಿ ನೊಂದಣಿ ಕಡ್ಡಾಯ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
2024-25
ನೇ ಸಾಲಿನಿಂದ ಕೇಂದ್ರ ಪುರಸ್ಕೃತ ವಿದ್ಯಾರ್ಥಿವೇತನ ಕಾರ್ಯಕ್ರಮಗಳಿಗೆ ಆಧಾರ್ ಬಯೋಮೆಟ್ರಿಕ್ ಅಥೆಂಟಿಕೇಷನ್ ಅಂಡ್ ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ.

ಸಂಬಂಧ ರಾಜ್ಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ಗ್ರಾಮ ಒನ್, ಬೆಂಗಳೂರು ಒನ್ ಹಾಗೂ ಕರ್ನಾಟಕ ಒನ್ ಕೇಂದ್ರಗಳಲ್ಲಿ ಪ್ರಕ್ರಿಯೆಯನ್ನು ಉಚಿತವಾಗಿ ಕೈಗೊಳ್ಳಲಾಗುವುದು. ಇದರೊಂದಿಗೆ ಸಮಾಜ ಕಲ್ಯಾಣ ಇಲಾಖೆ ಕಚೇರಿಗಳಲ್ಲಿಯೂ ಫೆಸಿಲಿಟೇಷನ್ ಕೇಂದ್ರಗಳನ್ನು ತೆರೆದು ದೃಢೀಕರಣ ಪಡೆಯಲಾಗುತ್ತಿದೆ.

ಅರ್ಹ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿದ ನಂತರ ಕಡ್ಡಾಯವಾಗಿ ಕೆವೈಸಿ ಧೃಡೀಕರಣ ನೊಂದಣಿ ಮಾಡಿಸಲು ಕೋರಿದೆ.

ಇಲ್ಲದವಾದಲ್ಲಿ ಕೇಂದ್ರ ಸರ್ಕಾರದಿಂದ ಬರುವ ಶೇ.60 ರಷ್ಟು ವಿದ್ಯಾರ್ಥಿವೇತನ ಮಂಜೂರಾಗುವುದಿಲ್ಲ ಎಂದು ಹೊಳಲ್ಕೆರೆ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -  - Advertisement - 
Share This Article
error: Content is protected !!
";