ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಹಿರಿಯೂರು ನಗರದ ಕನಕ ಪತ್ತಿನ ಸಹಕಾರ ಸಂಘದ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಎರಡು ಸ್ಥಾನಗಳು ಅವಿರೋಧವಾಗಿ ಆಯ್ಕೆಯಾಗಿವೆ.
ಕನಕ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಕಂದಿಕೆರೆ ಎಲ್.ತಿಪ್ಪೇಸ್ವಾಮಿ, ಉಪಾಧ್ಯಕ್ಷರಾಗಿ ಪರಮೇನಹಳ್ಳಿ ಪಾಂಡುರಂಗಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಅವಿರೋಧ ಆಯ್ಕೆಯಾದ ಅಧ್ಯಕ್ಷ ಉಪಾಧ್ಯಕ್ಷರನ್ನು ಸಂಘದ ನಿರ್ದೇಶಕರು, ಸಮಾಜದ ಹಿರಿಯರು, ಸ್ನೇಹಿತರು ಅಭಿನಂದಿಸಿ ಗೌರವಿಸಿದ್ದಾರೆ.