ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 2025-2028ನೇ ಸಾಲಿನ ರಾಜ್ಯ ಮತ್ತು ಜಿಲ್ಲಾ ಕಾರ್ಯಕಾರಿ ಮಂಡಳಿ ಚುನಾವಣೆಯನ್ನು ಘೋಷಣೆ ಮಾಡಲಾಗಿದ್ದು, ಚಿತ್ರದುರ್ಗ ನಗರದ ಪತ್ರಕರ್ತರ ಭವನದಲ್ಲಿ ಸೋಮವಾರ ಅರ್ಹ ಮತದಾರರ ಕರಡು ಪಟ್ಟಿ ಪ್ರಕಟಣೆ ಮಾಡಲಾಗಿದೆ.
ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಚುನಾವಣಾಧಿಕಾರಿ ಓ.ಪರಮೇಶ್ವರಪ್ಪ ಅವರು ಅರ್ಹ ಮತದಾರರ ಪಟ್ಟಿಯನ್ನು ಪತ್ರಕರ್ತರ ಸಮ್ಮುಖದಲ್ಲಿ ಪ್ರಚುರ ಪಡಿಸಿರುತ್ತಾರೆ.
ರಾಜ್ಯ ಮತ್ತು ಜಿಲ್ಲಾ ಕಾರ್ಯಕಾರಿ ಮಂಡಳಿಗೆ ಚುನಾವಣೆ ಘೋಷಣೆ ಮಾಡಿ ವೇಳಾಪಟ್ಟಿಯನ್ನು ಪ್ರಕಟ ಮಾಡಲಾಗಿದ್ದು, ಚುನಾವಣಾ ಕಚೇರಿಯು ನಗರದ ಪತ್ರಿಕಾ ಭವನದಲ್ಲಿ ಬೆಳಿಗ್ಗೆ 11 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಕಾರ್ಯನಿರ್ವಹಿಸಲಿದೆ.
ಅಕ್ಟೋಬರ್ 13ರಂದು ಮತದಾರರ ಕರಡು ಪಟ್ಟಿ ಪ್ರಕಟಣೆ ಮಾಡಲಾಗಿದ್ದು, ಅ.16 ರವರೆಗೆ ಮತದಾರರ ಪಟ್ಟಿಯಲ್ಲಿನ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅ.18 ಮತದಾರರ ಅಂತಿಮ ಪಟ್ಟಿ ಪ್ರಕಟಣೆ ಮಾಡಲಾಗುವುದು. ಅ.19 ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು, ಅ.27 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ. ಅ.28 ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಅ.30 ನಾಮಪತ್ರಗಳ ಹಿಂಪಡೆಯಲು ಕೊನೆಯ ದಿನ. ಅಂದೇ ಅಭ್ಯರ್ಥಿಗಳ ಅಂತಿಮ ಪಟ್ಟಿ ಪ್ರಕಟವಾಗಲಿದೆ.
ನವೆಂಬರ್ 09 ರಂದು ಭಾನುವಾರ ಬೆಳಿಗ್ಗೆ 9 ರಿಂದ ಮಧ್ಯಾಹ್ನ 3 ರವರೆಗೆ ಅಗತ್ಯ ಬಿದ್ದಲ್ಲಿ ಮತದಾನ ನಡೆಯಲಿದೆ. ನ.09 ರಂದು ಭಾನುವಾರ ಮಧ್ಯಾಹ್ನ 3.30ರ ನಂತರ ಮತಗಳ ಎಣಿಕೆ ನಡೆಯಲಿದ್ದು, ಬಳಿಕ ಫಲಿತಾಂಶ ಪ್ರಕಟವಾಗಲಿದೆ. ದೀಪಾವಳಿ ಹಬ್ಬದ ಪ್ರಯುಕ್ತ ಅಕ್ಟೋಬರ್ 20, 21 ಹಾಗೂ 22ರಂದು ರಜೆ ಇರುತ್ತದೆ.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 2025-2028ನೇ ಅವಧಿಯ ರಾಜ್ಯ ಸಂಘದ ಪದಾಧಿಕಾರಿಗಳ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರ ಮತ್ತು ಜಿಲ್ಲಾ ಘಟಕದ ಪದಾಧಿಕಾರಿಗಳ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರ ಚುನಾವಣೆಯು ನವೆಂಬರ್ 09ರಂದು ಭಾನುವಾರ ರಾಜ್ಯ ಸಂಘದ ಕಚೇರಿ ಹಾಗೂ ಜಿಲ್ಲಾ ಘಟಕದ ಕಚೇರಿಯಲ್ಲಿ ಏಕಕಾಲಕ್ಕೆ ನಡೆಯಲಿದೆ.
ಜಿಲ್ಲಾ ಘಟಕಗಳಿಗೂ ರಾಜ್ಯ ಸಂಘದ ಚುನಾವಣೆ ಜೊತೆಯಲ್ಲಿಯೇ ಚುನಾವಣೆ ನಡೆಯಲಿದೆ ಎಂದು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಚುನಾವಣಾಧಿಕಾರಿ ಓ.ಪರಮೇಶ್ವರಪ್ಪ ತಿಳಿಸಿದ್ದಾರೆ.

