ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ಸಾವಿರಕ್ಕೂ ಹೆಚ್ಚು ಗುತ್ತಿಗೆದಾರರು ತಮಗೆ ಹಾಗೂ ರೈತರಿಗೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸಲು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.
ಮೀಟರ್ ದರ ಹೆಚ್ಚಳ, ರೈತರಿಗೆ ವಿತರಿಸುವ ಟಿಸಿಗಳ ದರ ಹೆಚ್ಚಳ, ಗುತ್ತಿಗೆಯಲ್ಲಿ ತಾರತಮ್ಯ, ಸೇವಾಶುಲ್ಕ ಹೆಚ್ಚಳ ಹೀಗೆ ಹಲವು ಹಂತಗಳಲ್ಲಿ ದರ ಏರಿಕೆ ಮಾಡಿ ಸಾರ್ವಜನಿಕರಿಗೆ ರೈತರಿಗೆ ಹೊರೆಯಾಗಿ ಗುತ್ತಿಗೆದಾರರಿಗೆ ಕೆಲಸ ನಿರ್ವಹಿಸಲು ಸಾಧ್ಯವಾಗುತ್ತಿಲ್ಲ ಈ ಕುರಿತು ಸರ್ಕಾರ ಕೂಡಲೇ ಗಮನ ಹರಿಸಿ ಪರಿಹರಿಸಬೇಕೆಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಗುತ್ತಿಗೆದಾರರು ಹಾಗೂ ರೈತರಿಗೆ ಆಗುತ್ತಿರೋ ಸಮಸ್ಯೆಗಳನ್ನು ಕುರಿತು ಸರ್ಕಾರದ ಗಮನ ಸೆಳೆಯಲು ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ಗುತ್ತಿಗೆದಾರರಿಗೆ ಹಾಗು ರಾಜ್ಯದ ರೈತರಿಗೆ ಆಗುತ್ತಿರುವ ಅನ್ಯಾಯವನ್ನ ಸರಿಪಡಿಸಲು ಬೆಳಕು ಚೆಲ್ಲಬೇಕು ಎಂದು ಹೋರಾಟ ಸಮಿತಿ ಅಧ್ಯಕ್ಷ ಆನಂದ್ ವಿನಂತಿಸಿದ್ದಾರೆ.