ವಿದ್ಯುತ್ ಶಾರ್ಟ್ ಸರ್ಕ್ಯೂಟ್ ತಾಯಿ ಮತ್ತು ಮಗ ದಾರುಣ ಸಾವು

News Desk

ಚಂದ್ರವಳ್ಳಿ ನ್ಯೂಸ್, ದಾವಣಗೆರೆ:
ವಿದ್ಯುತ್ ಶಾರ್ಟ್ ಸರ್ಕ್ಯೂಟ್​ನಿಂದಾಗಿ ಬೆಂಕಿ ಹೊತ್ತಿಕೊಂಡಿದ್ದು ಈ ಅಗ್ನಿ ಅವಘಡದಲ್ಲಿ ತಾಯಿ‌ ಮತ್ತು ಮಗ ಮೃತಪಟ್ಟಿರುವ ದಾರುಣ ಘಟನೆ ದಾವಣಗೆರೆ ನಗರದ ಕಾಯಿಪೇಟೆಯಲ್ಲಿ ನಡೆದಿದೆ.

- Advertisement - 

ಬೆಂಕಿಯಿಂದಾಗಿ ವಿಮಲಾ (75) ಮತ್ತು ಅವರ ಪುತ್ರ ಕುಮಾರ್ (35) ಪ್ರಾಣ ಕಳೆದುಕೊಂಡ ದುರ್ದೈವಿಗಳು. ಮೃತರು ಬಿಜೆಪಿ ಮುಖಂಡ‌ ರುದ್ರಮುನಿಸ್ವಾಮಿ ಅವರ ಸಂಬಂಧಿಗಳಾಗಿದ್ದಾರೆ. ಬೆಂಕಿಯಿಂದ ಮನೆಯಲ್ಲಿದ್ದ ವಸ್ತುಗಳು ಸಂಪೂರ್ಣ ಸುಟ್ಟು ಕರಕಲಾಗಿವೆ.

- Advertisement - 

ತಡರಾತ್ರಿ ಮಲಗಿದ್ದ ಸಂದರ್ಭದಲ್ಲಿ ಮನೆಯಲ್ಲಿ ಬೆಂಕಿ ಹೊತ್ತಿಕೊಂಡಿವೆ. ಇದರಿಂದ ದಟ್ಟ ಹೊಗೆ ಆವರಿಸಿ ಮನೆಯಲ್ಲಿದ್ದ 6 ಮಂದಿಯ ಪೈಕಿ ನಾಲ್ವರು ಹೊರಗೆ ಓಡಿ ಬಂದಿದ್ದಾರೆ. ವಿಮಲಾ ಮತ್ತು ಕುಮಾರ್ ಅವರಿದ್ದ ಕೊಠಡಿ ಬಾಗಿಲು ಲಾಕ್​ ಆಗಿದ್ದರಿಂದ ಇಬ್ಬರೂ ಕೋಣೆಯಿಂದ ಹೊರಬರಲು ಸಾಧ್ಯವಾಗಿದೇ ಕೋಣೆಯಲ್ಲಿಯೇ ಸಿಲುಕಿಕೊಂಡು ಉಸಿರು ಕಟ್ಟಿ ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ.

ತಕ್ಷಣವೇ ಕುಟುಂಬಸ್ಥರು, ಅಗ್ನಿಶಾಮಕ ದಳ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಘಟನಾ ಸ್ಥಳಕ್ಕೆ ಆಗಮಿಸಿದ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಕೋಣೆಯಲ್ಲಿ ಪ್ರಜ್ಞೆ ಕಳೆದುಕೊಂಡಿದ್ದ ಇಬ್ಬರನ್ನೂ ರಕ್ಷಿಸಿ, ಆಸ್ಪತ್ರೆಗೆ ರವಾನಿಸಲಾಗಿದೆ. ಆದರೆ, ತೀವ್ರ ಅಸ್ವಸ್ಥರಾಗಿದ್ದರಿಂದ ಚಿಕಿತ್ಸೆ ಫಲಿಸದೇ ಇಬ್ಬರೂ ಸಾವಿಗೀಡಾಗಿದ್ದಾರೆ.

- Advertisement - 

ವಸ್ತುಗಳು ಬೆಂಕಿಗಾಹುತಿ: ಮನೆಯಲ್ಲಿದ್ದ ಪೀಠೋಪಕರಣಗಳು, ಎಲೆಕ್ಟ್ರಾನಿಕ್, ಇನ್ನಿತರ ವಸ್ತುಗಳು ಸುಟ್ಟು ಕರಕಲಾಗಿವೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಭೇಟಿ ನೀಡಿ ಬೆಂಕಿ ನಂದಿಸಿದ್ದಾರೆ.

ಮೀನಿನ ಅಕ್ವೇರಿಯಂನಲ್ಲಿ ವಿದ್ಯುತ್​ ಅವಘಡ ಸಂಭವಿಸಿದ ಹಿನ್ನೆಲೆ ಬೆಂಕಿ ಹೊತ್ತಿಕೊಂಡಿದೆ ಎಂದು ಅಗ್ನಿಶಾಮ ದಳ‌ ಸಿಬ್ಬಂದಿ ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಎಸ್​.ಪಿ ಉಮಾ ಪ್ರಶಾಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಿಜೆಪಿ ಮುಖಂಡರು ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.

 

Share This Article
error: Content is protected !!
";