ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಲೋಕಸೇವಾ ಆಯೋಗವು ಅಧಿಸೂಚಿಸಿರುವ ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿನ ಉಳಿಕೆ ಮೂಲ ವೃಂದದ ಗ್ರೂಪ್–ಎ ಸಹಾಯಕ ನಿಯಂತ್ರಕರು 43 ಹುದ್ದೆಗಳು ಮತ್ತು ಗ್ರೂಪ್–ಬಿ ಲೆಕ್ಕಪರಿಶೋಧನಾಧಿಕಾರಿ 54 ಹುದ್ದೆಗಳ ನೇಮಕಾತಿಗೆ
2024ನೇ ಆಗಸ್ಟ್ 11 ರಂದು ನಡೆಸಲಾದ ಪೂರ್ವಭಾವಿ ಪರೀಕ್ಷೆಯಿಂದ ಮುಖ್ಯ ಪರೀಕ್ಷೆಗೆ 1:20 ಅನುಪಾತದಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳ ಅರ್ಹತಾ ಪಟ್ಟಿಯನ್ನು ಅಕ್ಟೋಬರ್ 18 ರಂದು ಆಯೋಗದ ಜಾಲತಾಣ http://kpsc.kar.nic.in/list/eligibility ದಲ್ಲಿ ಪ್ರಕಟಿಸಲಾಗಿದೆ.
ಮುಖ್ಯ ಪರೀಕ್ಷೆಗೆ ಅರ್ಹರಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ದಿನಾಂಕದ ಕುರಿತು ಶೀಘ್ರದಲಿಯೇ ತಿಳಿಸಲಾಗುವುದು ಎಂದು ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿ ಡಾ.ರಾಕೇಶ್ ಕುಮಾರ್ ಕೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.