ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಲೋಕಸೇವಾ ಆಯೋಗವು ಅಧಿಸೂಚಿಸಿದ್ದ ಗೆಜೆಟೆಡ್ ಪ್ರೊನೇಷನರಿ 2023-24ನೇ ಸಾಲಿನ ಒಟ್ಟು 384 (ಆರ್.ಪಿ.ಸಿ-310 & ಹೈ.ಕ.-74) ಗ್ರೂಪ್-ಎ ಮತ್ತು ಗ್ರೂಪ್-ಬಿ ವೃಂದದ ಹುದ್ದೆಗಳಿಗೆ
ಮುಖ್ಯ ಪರೀಕ್ಷೆಯಿಂದ ವ್ಯಕ್ತಿತ್ವ ಪರೀಕ್ಷೆಗೆ 1:3 ರ ಅನುಪಾತದಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳ ಅರ್ಹತಾ ಪಟ್ಟಿಯನ್ನು ಆಯೋಗದ ಅಂತರ್ಜಾಲ http://kpsc.kar.nic.in/lixts/eligibility ನಲ್ಲಿ ಪ್ರಕಟಿಸಲಾಗಿದೆ ಎಂದು ಆಯೋಗದ ಕಾರ್ಯದರ್ಶಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

