ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ರೈಲ್ವೆ ಇಲಾಖೆಯ ಸೆಕ್ಯೂರಿಟಿ ಹುದ್ದೆಗಳಿಗೆ ಗುತ್ತಿಗೆ ಆಧಾರದಲ್ಲಿ ಮಾಜಿ ಸೈನಿಕರನ್ನು ಭರ್ತಿ ಮಾಡಿಕೊಳ್ಳುತ್ತಿದ್ದು, ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಯ ಆಸಕ್ತ ಮಾಜಿ ಸೈನಿಕರಿಗೆ ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪನಿರ್ದೇಶಕರ ಕಚೇರಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಮೇ 27ರವರಗೆ ಕಾಲಾವಕಾಶ ನೀಡಲಾಗಿತ್ತು.
ಒಟ್ಟು 48 ಮಾಜಿ ಸೈನಿಕರು ತಮ್ಮ ಹೆಸರುಗಳನ್ನು ನೋಂದಾಯಿಸಿಕೊಂಡಿರುತ್ತಾರೆ.
ನೋಂದಾಯಿತರ ಪಟ್ಟಿಯನ್ನು ಕಚೇರಿಯ ಸೂಚನಾ ಫಲಕದಲ್ಲಿ ಹಾಕಲಾಗಿದ್ದು, ಈ ಪಟ್ಟಿಗೆ ಆಕ್ಷೇಪಣೆಗಳೇನಾದರೂ ಇದ್ದರೆ ಇದೇ ಮೇ30 ಒಳಗೆ ಕಚೇರಿಯಲ್ಲಿ ಸಲ್ಲಿಸಬಹುದು ಎಂದು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪನಿರ್ದೇಶಕ ಡಾ.ಸಿ.ಎ.ಹಿರೇಮಠ ತಿಳಿಸಿದ್ದಾರೆ.