ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕದಲ್ಲಿ ಇರುವುದೊಂದೇ ಮುಖ್ಯಮಂತ್ರಿ ಕುರ್ಚಿ. ಆದರೆ, ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಸಿಎಂ ಕುರ್ಚಿಗಾಗಿ ಕೊನೆಯಿಲ್ಲದ ಹಗ್ಗ ಜಗ್ಗಾಟ ನಡೆಯುತ್ತಲೇ ಇದೆ ಎಂದು ವಿಪ ಶಾಸಕ ಸಿ.ಟಿ ರವಿ ತರಾಟೆ ತೆಗೆದುಕೊಂಡಿದ್ದಾರೆ.
ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಸ್ಥಾನಕ್ಕೆ ಕಿತ್ತಾಟ ನಡೆಸಿದ್ದರೆ, ಅಧಿಕಾರಿಗಳು ಲಂಚಾವತಾರದಲ್ಲಿ ಮುಳುಗಿದ್ದಾರೆ.
ಮುಖ್ಯಮಂತ್ರಿ ಸೇರಿದಂತೆ ಸಚಿವರಿಗೇ ಆಡಳಿತದ ಕುರಿತು ಕಾಳಜಿ ಇಲ್ಲದಿರುವಾಗ, ರಾಜ್ಯದಲ್ಲಿ ಆಡಳಿತ ಯಂತ್ರ ಕುಸಿಯದೆ ಇನ್ನೇನಾಗುತ್ತದೆ? ರಾಜ್ಯದಲ್ಲಿ ಸರ್ಕಾರ ಇದೆಯೇ? ಇದ್ದರೂ ಇವರಿಗೆ ಜವಾಬ್ದಾರಿ ಇದೆಯೇ ಎಂದು ಜನತೆ ಹಿಡಿಶಾಪ ಹಾಕುವಂತಾಗಿದೆ.
ನಿಮ್ಮ ಅಧಿಕಾರದ ದಾಹಕ್ಕೆ ರಾಜ್ಯದ ಹಿತವನ್ನು ಬಲಿ ಕೊಡುತ್ತಿರುವ ಕಾಂಗ್ರೆಸ್ ನಾಯಕರನ್ನು ರಾಜ್ಯದ ಜನತೆ ಕ್ಷಮಿಸಲು ಸಾಧ್ಯವೇ ಇಲ್ಲ ಎಂದು ರವಿ ಅವರು ಟೀಕಾಪ್ರಹಾರ ಮಾಡಿದ್ದಾರೆ.

