ಅಂಧ ಮಕ್ಕಳ ಸರ್ಕಾರಿ ಪಾಠಶಾಲೆಗೆ ದಾಖಲಾತಿ ಪ್ರಾರಂಭ

News Desk

ಚಂದ್ರವಳ್ಳಿ ನ್ಯೂಸ್, ದಾವಣಗೆರೆ:
ಅಂಧ
ಮಕ್ಕಳ ಸರ್ಕಾರಿ ಪಾಠಶಾಲೆ, ದಾವಣಗೆರೆಯಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿಗೆ 1ನೇ ತರಗತಿಯಿಂದ 10ನೇ ತರಗತಿವರೆಗೆ ಅಂಧ ಹೆಣ್ಣು ಮತ್ತು ಗಂಡು ಮಕ್ಕಳಿಗೆ ದಾಖಲಾತಿ ಪ್ರಾರಂಭವಾಗಿದೆ.

     ಶಾಲೆಯಲ್ಲಿ ಅಂಧ ಹೆಣ್ಣು ಮಕ್ಕಳಿಗೆ ಉಚಿತ ಶಿಕ್ಷಣದ ಜೊತೆಗೆ ವಸತಿಯುತ ಶಾಲೆಯಾಗಿರುತ್ತದೆ. ಸಾರ್ವಜನಿಕ ಶಿಕ್ಷಣ ಇಲಾಖೆಯವರು ನಿಗದಿಪಡಿಸಿರುವ ಸಾಮಾನ್ಯ ಮಕ್ಕಳಿಗೆ ನೀಡುತ್ತಿರುವ ಶಿಕ್ಷಣವನ್ನೇ ಇಲ್ಲಿಯೂ ಭೋದಿಸುವುದರ ಜೊತೆಗೆ ಬ್ರೈಲ್ ಲಿಪಿಯನ್ನು ಅಳವಡಿಸಿಲಾಗಿದೆ. ಬ್ರೈಲ್ ಪುಸ್ತಕಗಳು, ಶಾಲಾ ಸಮವಸ್ತ್ರ, ಕಲಿಕಾ ಉಪಕರಣಗಳು, ವೈದ್ಯಕೀಯ ತಪಾಸಣೆಯನ್ನು ಉಚಿತವಾಗಿ ನೀಡಲಾಗುತ್ತದೆ.

    ಶೈಕ್ಷಣಿಕ ಅವಧಿಯಲ್ಲಿ ಅಂಧ ಮಕ್ಕಳಿಗೆ ಪಠ್ಯೇತರ ಚಟುವಟಿಕೆಗಳಾದ  ಯೋಗ ಮೆಡಿಟೇಷನ್. ದೈಹಿಕ ಶಿಕ್ಷಣ, ಸಂಗೀತ, ಡ್ಯಾನ್ಸ್ ಡ್ರಾಮ, ಚಲನವಲನ ತರಬೇತಿ. ಕಂಪ್ಯೂಟರ್ ತರಬೇತಿ, ಒಳಾಂಗಣ ಹಾಗೂ ಹೊರಾಂಗಣ ಆಟಗಳು, ಕರಕುಶಲ ಕಾರ್ಯ ಚಟುವಟಿಕೆಗಳನ್ನು ಹೇಳಿಕೊಡಲಾಗುತ್ತದೆ.

   ಅಂಥ ಹೆಣ್ಣು ಮಕ್ಕಳ ವಸತಿನಿಲಯದಲ್ಲಿ ಸ್ನಾನಕ್ಕೆ ಬಿಸಿ ನೀರಿನ ವ್ಯವಸ್ಥೆ (ಸೋಲಾರ್ ವಾಟರ್ ಹೀಟರ್) ಮತ್ತು ಇತರೆ ಸೌಲಭ್ಯಗಳನ್ನು ಯಾವುದೇ ಶುಲ್ಕವಿಲ್ಲದೆ ಸರ್ಕಾರದ ವತಿಯಿಂದ ಸಂಪೂರ್ಣವಾಗಿ ಶಾಲೆಯಲ್ಲಿ ಒದಗಿಸಲಾಗುವುದು. ಸಾರ್ವಜನಿಕರು ತಮ್ಮ ವ್ಯಾಪ್ತಿಯಲ್ಲಿರುವ ದೃಷ್ಟಿ ವಿಕಲಚೇತನ ಮಕ್ಕಳು ಕಂಡು ಬಂದಲ್ಲಿ ಅವರ ಪೋಷಕರಿಗೆ ನಮ್ಮ ಶಾಲೆಯ ಬಗ್ಗೆ ಮಾಹಿತಿ ನೀಡಿ, ಶೇ. 40 ಕ್ಕಿಂತ ಹೆಚ್ಚಿನ ದೃಷ್ಟಿದೋಷ ಹೊಂದಿರುವ ಮಕ್ಕಳು ನಮ್ಮ ಸರ್ಕಾರಿ ಶಾಲೆಗೆ ದಾಖಲಾಗುವಂತೆ ಮಾಡಿ. ವಿಕಲಚೇತನ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಸಹಕರಿಸಬೇಕು.

   ಹೆಚ್ಚಿನ ಮಾಹಿತಿಗಾಗಿ ಅಂಧ ಮಕ್ಕಳ ಸರ್ಕಾರಿ ಪಾಠಶಾಲೆ, ದೇವರಾಜ ಅರಸ್ ಬಡಾವಣೆ ಬಿ ಬ್ಲಾಕ್, ಶಿವಾಲಿ ಟಾಕೀಸ್ ಹತ್ತಿರ ದಾವಣಗೆರೆ577006 ಹಾಗೂ ಡಾ.ಕೆ.ಕೆ.ಪ್ರಕಾಶ್, ಶಾಲೆಯ ಅಧೀಕ್ಷಕರು, ಅವರ ದೂರವಾಣಿ ಸಂ: 9448415383, ಅಥವಾ ಕಛೇರಿ ಸಂಖ್ಯೆ: 08192-250442 ನ್ನು ಸಂಪರ್ಕಿಸಲು ಅಂಧ ಮಕ್ಕಳ ಸರ್ಕಾರಿ ಪಾಠಶಾಲೆಯ ಅಧೀಕ್ಷಕರು ತಿಳಿಸಿದ್ದಾರೆ.

 

Share This Article
error: Content is protected !!
";