ಉದ್ಯಮಶೀಲತೆ ಮತ್ತು ಕೌಶಲ್ಯಾಭಿವೃದ್ದಿ ತರಬೇತಿ ಕಾರ್ಯಗಾರ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಭಾರತೀಯ ವಿಜ್ಞಾನ ಸಂಸ್ಥೆ,  ವಿಜ್ಞಾನ ತಂತ್ರಜ್ಞಾನ ಮತ್ತು ನಾವಿನ್ಯತ ಕೇಂದ್ರ (ಎಸ್ಟಿಐ ಹಬ್) ಹಾಗೂ  ಸೊಸೈಟಿ ಫಾರ್ ಇನ್ನೋವೇಷನ್ ಅಂಡ್ ಡೆವಲಪ್ಮೆಂಟ್ (ಎಸ್ಐಡಿ), ಸಹಯೋಗದಲ್ಲಿ ಚಳ್ಳಕೆರೆ ತಾಲ್ಲೂಕಿನ ಕುದಾಪುರ ಭಾರತೀಯ ವಿಜ್ಞಾನ ಸಂಸ್ಥಾನ ಆವರಣದಲ್ಲಿ ನವೆಂಬರ್ 6 ರಿಂದ 11 ರವರೆಗೆ ಉದ್ಯಮಶೀಲತೆ ಮತ್ತು ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಗಾರವನ್ನು  ಆಯೋಜಿಸಲಾಗಿದೆ.

6 ದಿನಗಳ ತರಬೇತಿಯಲ್ಲಿ ಹೊಸ ಉದ್ಯಮವನ್ನು ಆರಂಭಿಸಲು ಆಸಕ್ತಿ ಇರುವವರಿಗಾಗಿ  ಉದ್ಯಮಶೀಲತೆ ಮತ್ತು ಕೌಶಲ್ಯಾಭಿವೃದ್ಧಿ ಕುರಿತು ತರಬೇತಿ ನೀಡಲಾಗುವುದು.  18-45 ವರ್ಷದೊಳಗಿನ ಕನಿಷ್ಠ ಎಸ್.ಎಸ್.ಎಲ್.ಸಿ ವಿದ್ಯಾರ್ಹತೆ ಹೊಂದಿರುವ ಆಸಕ್ತ ಅಭ್ಯರ್ಥಿಗಳು .25 ಒಳಗೆ ತಮ್ಮ ಹೆಸರನ್ನು ಗಣೇಶ್ ಮೊ. 8970582703, ಕೋಟೇಶ್ ಮೊ.9743675646 ಗೆ ಕರೆ ಮಾಡಿ ನೊಂದಾಯಿಸಿಕೊಳ್ಳಬಹುದು.

- Advertisement - 

.28ರೊಳಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಎಸ್.ಸಿ, ಎಸ್.ಟಿ  ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು.

ಆಯ್ಕೆಯಾದ  ಅಭ್ಯರ್ಥಿಗಳು ಕಡ್ಡಾಯವಾಗಿ 6 ದಿನಗಳ ತರಬೇತಿ ಕಾರ್ಯಗಾರದಲ್ಲಿ ಭಾಗವಹಿಸಬೇಕು. ಊಟ ಮತ್ತು ವಸತಿ ಸೌಲಭ್ಯದೊಂದಿಗೆ  ಸಂಪೂರ್ಣ ಉಚಿತವಾಗಿ ತರಬೇತಿ  ನೀಡಲಾಗುತ್ತಿದ್ದು ಇದರ ಸದಪಯೋಗ ಪಡೆದುಕೊಳ್ಳುವಂತೆ ವಿಜ್ಞಾನ ತಂತ್ರಜ್ಞಾನ ಮತ್ತು ನಾವಿನ್ಯತ ಕೇಂದ್ರ ವ್ಯವಸ್ಥಾಪಕ ಪ್ರತಾಪ್ ಮೂರ್ತಿ ತಿಳಿಸಿದ್ದಾರೆ.

- Advertisement - 

 

Share This Article
error: Content is protected !!
";