ಪರಿಸರ ಸಂರಕ್ಷಣೆ ಬಿಜೆಪಿಯ ಸಂಕಲ್ಪ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಪರಿಸರ ಸಂರಕ್ಷಣೆ ಬಿಜೆಪಿಯ ಸಂಕಲ್ಪ” ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ತಿಳಿಸಿದರು.

ಶಿಕಾರಿಪುರ ವಿಧಾನಸಭಾ ಕ್ಷೇತ್ರದ ತೋಗರ್ಸಿಯಲ್ಲಿ ಸಸಿ ನೆಡುವ ಮೂಲಕ ಅವರು ಪರಿಸರ ಸಂರಕ್ಷಣೆಯ ಜಾಗೃತಿ ಮೂಡಿಸಿದರು.

- Advertisement - 

ಮನುಕುಲಕ್ಕೆ ಅತಿಮುಖ್ಯವಾಗಿರುವ ಪ್ರಕೃತಿಯ ರಕ್ಷಣೆ ಮಾಡುವ ನಿಟ್ಟಿನಲ್ಲಿ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರ ಕರೆಯ ಮೇರೆಗೆ ನಮ್ಮ ಪಕ್ಷವು ದೇಶಾದ್ಯಂತ ಆಯೋಜಿಸಿರುವ ಲಕ್ಷ ವೃಕ್ಷ ಅಭಿಮಾನವು ಅತ್ಯಂತ ಯಶಸ್ವಿಯಾಗಿ ಮುನ್ನಡೆಯುತ್ತಿರುವ ಈ ಸಂದರ್ಭದಲ್ಲಿ ಎಲ್ಲರೂ ಪರಿಸರ ಉಳಿಸಿ, ಬೆಳೆಸುವಲ್ಲಿ ಶ್ರಮಿಸಬೇಕೆಂಬ ಅವರು ಕರೆ ನೀಡಿ ಸಂಕಲ್ಪ ಮಾಡಿದರು.

ಈ ಸಂದರ್ಭದಲ್ಲಿ ತಾಲ್ಲೂಕು ಅಧ್ಯಕ್ಷ ಹನುಮಂತಪ್ಪ, ಮಲೆನಾಡು ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಗುರುಮೂರ್ತಿ, ರೈತ ಮೋರ್ಚಾ ಜಿಲ್ಲಾಧ್ಯಕ್ಷ ಸಿದ್ದಲಿಂಗಪ್ಪ ಸೇರಿದಂತೆ ಪಕ್ಷದ ಪದಾಧಿಕಾರಿಗಳು, ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

- Advertisement - 

Share This Article
error: Content is protected !!
";