ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರಿನಲ್ಲಿ ಅಂಬೇಡ್ಕರ್ ಮ್ಯೂಸಿಯಮ್ ರಚಿಸಲಾಗುವುದು ಮತ್ತು ಇಡೀ ದೇಶದಲ್ಲೇ ಅತ್ಯಂತ ಎತ್ತರದ ಅಂಬೇಡ್ಕರ್ ಪ್ರತಿಮೆ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿಗಳು ಘೋಷಿಸಿದರು.
ಪ್ರಧಾನಿ ಮೋದಿಗೆ ಸವಾಲೆಸೆದ ಸಿಎಂ- ನಾವು ರಾಜ್ಯದಲ್ಲಿ ಜಾರಿಗೆ ತಂದಿರುವ scp/tsp ಕಾಯ್ದೆಯನ್ನು ಇಡೀ ದೇಶದಲ್ಲಿ ಜಾರಿಗೆ ತರಲು ನಿಮ್ಮಿಂದ ಸಾಧ್ಯವಾ ಎಂದು ಪ್ರಶ್ನಿಸಿದ ಪ್ರಧಾನಿ ಮೋದಿ ಅವರಿಗೆ ಸಿಎಂ ನೇರ ಸವಾಲು ಹಾಕಿದರು. ರಾಷ್ಟ್ರಮಟ್ಟದಲ್ಲಿ ಈ ಕಾಯ್ದೆಯನ್ನು ಜಾರಿಗೆ ತಂದು ತೋರಿಸಿ ಎಂದು ಸವಾಲು ಹಾಕಿದರು.