ಇ-ಖಾತಾ ಪಡೆಯಲು ಸಹಾಯವಾಣಿ ಸ್ಥಾಪನೆ-ಜಿಲ್ಲಾಧಿಕಾರಿ ವೆಂಕಟೇಶ್

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಜಿಲ್ಲೆಯ ಎಲ್ಲಾ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿರುವ, ಆದರೆ ಇದುವರೆಗೂ ಖಾತಾ ಪಡೆಯದೇ ಇರುವ ಕಟ್ಟಡಗಳ ಮತ್ತು ನಿವೇಶನಗಳ ಮಾಲೀಕರು ನಗರಾಭಿವೃದ್ಧಿ ಇಲಾಖೆಯಿಂದ ನಿಯಮಾನುಸಾರ ಅವಕಾಶ ಕಲ್ಪಿಸಿಕೊಟ್ಟಂತೆ, ಮೂರು ತಿಂಗಳ ಒಳಗಾಗಿ ಅಂದರೆ 2025 ಮೇ 10ರೊಳಗೆ ಬಿರಿಜಿಸ್ಟರ್ನಲ್ಲಿ ನಮೂದಿಸಿಕೊಂಡು ಖಾತಾ ಪಡೆಯಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಕರೆ ನೀಡಿದ್ದಾರೆ.

ಕರ್ನಾಟಕ ಪೌರಸಭೆಗಳ ಅಧಿನಿಯಮ 1964 ಪ್ರಕರಣ 110 ಅನ್ವಯ ರಿಜಿಸ್ಟರ್ನಲ್ಲಿ ಅಂದರೆ ಸಕ್ಷಮ ಪ್ರಾಧಿಕಾರದಿಂದ ಅನುಮೋದನೆ ಪಡೆಯಲಾದ ಬಡಾವಣೆಯಲ್ಲಿನ ಸ್ವತ್ತುಗಳಿಗೆ ಖಾತಾ ನೀಡಲಾಗುತ್ತದೆ.

ಆದರೆ, ಭೂ ಪರಿವರ್ತನೆ ಆಗದೇ ಉಪವಿಭಜನೆ ಮಾಡಿ ನಿವೇಶನಗಳಾಗಿ ಮಾರಾಟ ಮಾಡಿರುವ ನಿವೇಶನ, ಕಟ್ಟಡಗಳು ಮತ್ತು ಭೂ ಪರಿವರ್ತನೆಯಾಗಿದ್ದು, ಆದರೆ ಸಕ್ಷಮ ಪ್ರಾಧಿಕಾರದಿಂದ ಅನುಮೋದನೆಯಾಗದ ಬಡಾವಣೆಗಳಲ್ಲಿನ ನಿವೇಶನ ಅಥವಾ ಕಟ್ಟಡಗಳಿಗೆ ಬಿರಿಜಿಸ್ಟರ್ನಲ್ಲಿ ನಮೂದಿಸಿಕೊಂಡು ಖಾತಾ ನೀಡಲಾಗುತ್ತದೆ. ಅವಕಾಶವನ್ನು ಒಮ್ಮೆ ಮಾತ್ರ ನೀಡಲಾಗುತ್ತಿದ್ದು, ಕಟ್ಟಡ ನಿವೇಶನಗಳ ಮಾಲೀಕರು ಅವಕಾಶದ ಸದುಪಯೋಗ ಪಡಿಸಿಕೊಳ್ಳಲು ಜಿಲ್ಲಾಧಿಕಾರಿಗಳು ಕರೆ ನೀಡಿದ್ದಾರೆ.

 “ಬಿರಿಜಿಸ್ಟರ್ನಲ್ಲಿ ದಾಖಲಿಸುವ ಆಸ್ತಿಗಳಿಗೆ 2024-25ನೇ ಸಾಲಿಗೆ ಮೊದಲ ಬಾರಿಗೆ ಸ್ವತ್ತು ತೆರಿಗೆಯ 2 ರಷ್ಟು ತೆರಿಗೆಯನ್ನು ವಿಧಿಸಲಾಗುತ್ತದೆ. ತದನಂತರದ ವರ್ಷಗಳಲ್ಲಿ ಸ್ವತ್ತು ತೆರಿಗೆಯನ್ನು ಮಾತ್ರ ವಿಧಿಸಲಾಗುತ್ತದೆ.  ಕರ್ನಾಟಕ ಪೌರಸಭೆಗಳ ಅಧಿನಿಯಮ 1964 ಪ್ರಕರಣ 106 ಕ್ಕೆ ತಿದ್ದುಪಡಿ ತರಲಾದಂತೆ ದಿನಾಂಕ: 10.09.2024 ರಿಂದ ಜಾರಿಗೆ ಬಂದಂತೆ  ತೆರಿಗೆಯನ್ನು ವಿಧಿಸಲಾಗುತ್ತದೆ.

ಬಿರಿಜಿಸ್ಟರ್ನಲ್ಲಿ ಸರ್ಕಾರಿ ಜಾಗದಲ್ಲಿರುವ ಸ್ವತ್ತುಗಳು, ಸರ್ಕಾರದ ನಿಗಮ ಮಂಡಳಿಗಳ ಜಾಗಗಳು, ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಜಾಗಗಳು ಹೊರತುಪಡಿಸಿ ದಿನಾಂಕ: 10.09.2024 ಪೂರ್ವಕ್ಕೆ ನೋಂದಾಯಿತವಾದ ಭೂ ಪರಿವರ್ತನೆ ಆಗದೇ ಉಪ ವಿಭಜನೆ ಮಾಡಿ ನಿವೇಶನಗಳಾಗಿ ಮಾರಾಟ ಮಾಡಿರುವ ನಿವೇಶನ, ಕಟ್ಟಡಗಳು ಮತ್ತು ಭೂ ಪರಿವರ್ತನೆಯಾಗಿ ಸಕ್ಷಮ ಪ್ರಾಧಿಕಾರದಿಂದ ಅನುಮೋದನೆಯಾಗದ ಬಡಾವಣೆಗಳಲ್ಲಿನ ನಿವೇಶನ, ಕಟ್ಟಡಗಳಿಗೆ ಬಿರಿಜಿಸ್ಟರ್ನಲ್ಲಿ ನಮೂದಿಸಿಕೊಂಡು ಖಾತಾ ನೀಡಲಾಗುತ್ತದೆ.

ಆದುದರಿಂದ, ಇದುವರೆಗೆ ಖಾತಾ ಪಡೆಯದ ಅಂತಹ ಎಲ್ಲಾ ಸ್ವತ್ತುಗಳ ಮಾಲೀಕರು ಕೂಡಲೇ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಕಛೇರಿಗಳಿಗೆ ಭೇಟಿ ನೀಡಿ ಅಥವಾ ಸಹಾಯವಾಣಿ ಸಂಪರ್ಕಿಸಿ ಅಥವಾ ಕಛೇರಿಗಳಿಂದ ಏರ್ಪಡಿಸಲಾಗುವ ವಾರ್ಡ್ವಾರು ಕ್ಯಾಂಪ್ಗಳಿಗೆ ಭೇಟಿ ನೀಡಿ ಬಿರಿಜಿಸ್ಟರ್ನಲ್ಲಿ ಖಾತಾ ಪಡೆಯಲು ಅರ್ಜಿ ಸಲ್ಲಿಸಿ, ಸರ್ಕಾರ ನೀಡಿರುವ ಅವಕಾಶ ಸದುಪಯೋಗ ಪಡಿಸಿಕೊಳ್ಳಲು ಕರೆ ನೀಡಿದ್ದಾರೆ.

 ಖಾತಾಗೆ ಸಂಬಂಧಿಸಿದಂತೆ ಸಹಾಯವಾಣಿ ಸ್ಥಾಪಿಸಲಾಗಿದ್ದು, ಚಿತ್ರದುರ್ಗ ನಗರಸಭೆ08194-222401, ಕೆ.ಕಿರಣ್ ಕುಮಾರ್9606281164. ಚಳ್ಳಕೆರೆ ನಗರಸಭೆ08195-200093, ಎಸ್.ವೀರಭದ್ರಪ್ಪ8050551355. ಹಿರಿಯೂರು ನಗರಸ¨s-08193-296220, ಮಲ್ಲಿಕಾರ್ಜುನ ಸ್ವಾಮಿ9620287514. ಹೊಸದುರ್ಗ ಪುರಸಭೆ08199-295095, ಎನ್.ವಿನಯ್9353833372. ಹೊಳಲ್ಕೆರೆ ಪುರಸಭೆ08191-275861, ಎಂ.ದೇವರಾಜ್9845912244. ಮೊಳಕಾಲ್ಮೂರು ಪಟ್ಟಣ ಪಂಚಾಯಿತಿ08198-229044, ಎಲ್.ಹೆಚ್.ತಿಪ್ಪೇಸ್ವಾಮಿ9845174196, ನಾಯಕನಹಟ್ಟಿ ಪಟ್ಟಣ ಪಂಚಾಯಿತಿ08190-200232, ಆರ್.ಸಂದೀಪ್9606307100 ಇವರನ್ನು ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article
error: Content is protected !!
";