ಚಿತ್ರದುರ್ಗದಲ್ಲೂ ಪ್ಯಾಲೆಸ್ತೀನ್ ಧ್ವಜ ಹಿಡಿದು ಪರ ಘೋಷಣೆ ಕೂಗಿದ ಕಿಡಿಗೇಡಿಗಳು

News Desk

ಚಿತ್ರದುರ್ಗದಲ್ಲೂ ಪ್ಯಾಲೆಸ್ತೀನ್ ಧ್ವಜ ಹಿಡಿದು ಪರ ಘೋಷಣೆ ಕೂಗಿದ ಕಿಡಿಗೇಡಿಗಳು
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಈದ್ ಮಿಲಾದ್ ಸಂದರ್ಭದಲ್ಲಿ ಹಮ್ಮಿಕೊಳ್ಳಲಾಗಿದ್ದ ಮೆರವಣಿಗೆ ವೇಳೆ ಕೆಲ ಮುಸ್ಲಿಂ ಯುವಕರು ಚಿತ್ರದುರ್ಗದ ಗಾಂಧಿ ವೃತ್ತದಲ್ಲಿ ಪ್ಯಾಲೆಸ್ತೀನ್ ಧ್ವಜ ಹಿಡಿದು ಸಾಗಿದ್ದಾರೆ.
ಬಂದೋಬಸ್ತ್ ನಲ್ಲಿ ಪೊಲೀಸರು ಕೂಡಲೇ ಪ್ಯಾಲೆಸ್ತೀನ್ ಧ್ವಜ ಹಿಡಿದಿದ್ದ ಯುವಕರಿಂದ ಧ್ವಜ ವಶಪಡಿಸಿಕೊಂಡಾಗ, ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗುವ ಮೂಲಕ ಬಿಕ್ಕಟ್ಟಿನ ಸನ್ನಿವೇಶ ಸೃಷ್ಠಿ ಮಾಡಿದರು.
ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಪ್ಯಾಲೆಸ್ತೀನ್ ಧ್ವಜ ಹಿಡಿದು ಘೋಷಣೆ ಕೂಗಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

- Advertisement -  - Advertisement - 
Share This Article
error: Content is protected !!
";