ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಎತ್ತ ಸಾಗುತ್ತಿದೆ ಕರ್ನಾಟಕ, ತಾಲಿಬಾನ್‌ಆಡಳಿತ ಕೂಡಾ ಇಷ್ಟು ಕೆಟ್ಟು ಹೋಗಿಲ್ಲ!!! ಎಂದು ಬಿಜೆಪಿ ವಾಗ್ದಾಳಿ ಮಾಡಿದೆ.
ಅಪರಾತ್ರಿ, ಸುರಿಯುತ್ತಿರುವ ಮಳೆ, ವಿಪರೀತ ಚಳಿ, ಹಸಿದ ಹೊಟ್ಟೆ, ಒಬ್ಬಾಕೆಯ ಕಂಕುಳಲ್ಲಿ ಪುಟ್ಟ ಕಂದಮ್ಮ, ಕೈಯಲ್ಲಿ ಶೈಕ್ಷಣಿಕ ದಾಖಲೆಗಳು…. ಈ ದೃಶ್ಯಗಳು ಊರಿಗೆ ಹೊರಟವರೋ, ಪ್ರವಾಸಕ್ಕೆ ಹೊರಟವರು ಎದುರಿಸುತ್ತಿರುವ ಸನ್ನಿವೇಶಗಳಲ್ಲ, ಇದೆಲ್ಲವೂ ಭಾವೀ ಸರ್ಕಾರಿ ಅಧಿಕಾರಿಗಳಾಗಬೇಕಿರುವ ಅಭ್ಯರ್ಥಿಗಳು ನಾಲಾಯಕ್‌ಕರ್ನಾಟಕ ಕಾಂಗ್ರೆಸ್ ಸರ್ಕಾರದಿಂದ ಎದುರಿಸುತ್ತಿರುವ ಸಮಸ್ಯಗಳು ಎಂದು ಬಿಜೆಪಿ ದೂರಿದೆ.
ಕೆಪಿಎಸ್‌ಸಿ ಕರ್ಮಕಾಂಡಗಳಿಗೆ ನ್ಯಾಯಾಲಯದಿಂದ ಉಗಿಸಿಕೊಂಡಿದ್ದ ಸರ್ಕಾರ, ಅಂತಿಮವಾಗಿ ಮೇ 3 ರಂದು ಪರೀಕ್ಷೆ ನಡೆಸುವುದಾಗಿ ಒಪ್ಪಿಕೊಂಡಿತ್ತು. ಆದರೆ ಪರೀಕ್ಷೆಯ ಹಿಂದಿನ ದಿನ ಮಧ್ಯರಾತ್ರಿ 12 ಗಂಟೆಗೆ ಹಾಲ್‌ಟಿಕೆಟ್‌ನೀಡುತ್ತೇವೆ ಎನ್ನುವ ಮೂಲಕ ಅಭ್ಯರ್ಥಿಗಳನ್ನು ಅತಂತ್ರರನ್ನಾಗಿಸಿದೆ. ನಡುರಾತ್ರಿ ಅರ್ಜಿ ಸಲ್ಲಿಸಿ, ಹಾಲ್ ಟಿಕೆಟ್ ಪಡೆದು ಮರುದಿನ ಪರೀಕ್ಷೆಗೆ ಹಾಜರಾಗಬೇಕು ಎಂದರೆ ಹೇಗೆ ಸಾಧ್ಯ? ಎಂದು ಬಿಜೆಪಿ ವಾಗ್ದಾಳಿ ಮಾಡಿದೆ.
ದೂರದ ಊರುಗಳ ಅಭ್ಯರ್ಥಿಗಳು ಏನು ಮಾಡಬೇಕು?, 12 ಗಂಟೆ ರಾತ್ರಿಗೆ ಹೆಣ್ಣು ಮಕ್ಕಳು, ಮಹಿಳೆಯರು ಬರಲು ಸಾಧ್ಯವೇ? ನಡುರಾತ್ರಿ ಬರುವ ಹೆಣ್ಣು ಮಕ್ಕಳಿಗೆ ಸರ್ಕಾರ ಎಸ್ಕಾರ್ಟ್‌ವ್ಯವಸ್ಥೆ ಮಾಡುತ್ತದೆಯೇ? ಹೀಗೆ ಪ್ರಶ್ನೆಗಳ ಸುರಿಮಳೆಗಳನ್ನು ಅಭ್ಯರ್ಥಿಯೋರ್ವರು ಸಿಎಂ ಸಿದ್ದರಾಮಯ್ಯ ಅವರ ಮುಖಕ್ಕೆ ಎಸೆದಿದ್ದಾರೆ, ಏನು ಉತ್ತರ ಹೇಳುತ್ತಾರೆ ತುಘಲಕ್‌ದರ್ಬಾರಿನ ರಾಯಭಾರಿಗಳು? ನೆಟ್ಟಗೆ ಒಂದು ಪರೀಕ್ಷೆ ನಡೆಸಲು ಕೈಲಾಗದವರಿಗೆ ಆಡಳಿತ ನಡೆಸಲು ಯಾವ ಅರ್ಹತೆಯಿದೆ? ಎಂದು ಬಿಜೆಪಿ ತೀಕ್ಷ್ಣವಾಗಿ ಪ್ರಶ್ನಿಸಿದೆ.