ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಪ್ರತಿಯೊಬ್ಬರೂ ಪಾಲ್ಗೊಳ್ಳಿ-ಸಿಎಂ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ನಮ್ಮ ಸಮೀಕ್ಷೆ – ನಮ್ಮ ಜವಾಬ್ದಾರಿ. ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಎನ್ನುವುದು ರಾಜ್ಯದ ಎಲ್ಲಾ ಜನರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳನ್ನು ತಿಳಿದುಕೊಂಡು ರಾಜ್ಯದ ನೀತಿ ನಿರೂಪಣೆಯನ್ನು ಕೈಗೊಳ್ಳಲು ಆಧಾರವಾಗಿರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗವು ರಾಜ್ಯದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ – 2025 ಅನ್ನು ಸೆಪ್ಟೆಂಬರ್‌22 ರಿಂದ ಅಕ್ಟೋಬರ್‌7ರ ವರೆಗೆ ನಡೆಸಲಿದೆ.

- Advertisement - 

ಸಮೀಕ್ಷೆ ಕಾರ್ಯದಲ್ಲಿ ಪ್ರತಿಯೊಬ್ಬರೂ ಪಾಲ್ಗೊಳ್ಳಬೇಕು. ಯಾರೂ ಕೂಡಾ ಸಮೀಕ್ಷೆಯಿಂದ ಹೊರಗುಳಿಯಬಾರದು.  ಎಲ್ಲರೂ ಪ್ರತಿಯೊಂದು ಪ್ರಶ್ನೆಗಳಿಗೆ ಸಮರ್ಪಕವಾದ ಮಾಹಿತಿಯನ್ನು ಒದಗಿಸಬೇಕು. ಸರಿಯಾದ ಮಾಹಿತಿ ನೀಡಿದರೆ ಮಾತ್ರ ವೈಜ್ಞಾನಿಕ ಸಮೀಕ್ಷೆ ಸಾಧ್ಯವಿದೆ.

ಆಯೋಗದ ಸಹಾಯವಾಣಿ ಸಂಖ್ಯೆ 8050770004 ಗೆ ಕರೆ ಮಾಡಿ ಸಾರ್ವಜನಿಕರು ಸಮೀಕ್ಷೆ ಕುರಿತು ಯಾವುದೇ ದೂರು ಅಥವಾ ಮಾಹಿತಿಯನ್ನು ಪಡೆಯಬಹುದು. ಆನ್‌ಲೈನ್ ಮೂಲಕವೂ ಸಮೀಕ್ಷೆಯಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

- Advertisement - 

 

Share This Article
error: Content is protected !!
";