ನಗರಸಭೆ, ಪುರಸಭೆ ಪಪಂಗಳಲ್ಲೂ ಒಸಿಗೆ ವಿನಾಯಿತಿ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಜಿಬಿಎ ವ್ಯಾಪ್ತಿಯ 1,200 ಚ.ಅಡಿ ವಿಸ್ತೀರ್ಣದ ನಿವೇಶನದಲ್ಲಿನ‌ಕಟ್ಟಡಗಳಿಗೆ ಒಸಿ ಪಡೆಯುವುದರಿಂದ ವಿನಾಯಿತಿ ನೀಡಿ ಆದೇಶ ಹೊರಡಿಸಿದ್ದ ಬೆನ್ನಲ್ಲೇ ರಾಜ್ಯದ ಇತರ ಮಹಾನಗರ ಪಾಲಿಕೆಗಳು, ನಗರಸಭೆ, ಪುರಸಭೆಗಳಲ್ಲಿಯೂ ಒಸಿ ಪಡೆಯುವುದರಿಂದ ವಿನಾಯಿತಿ ನೀಡಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ.‌

ಅದರಂತೆ ಕರ್ನಾಟಕ ಪೌರಸಭೆಗಳ ಅಧಿನಿಯಮ, 1964ರ ಕಲಂ 190 (2A)ರಡಿ ಸರ್ಕಾರಕ್ಕಿರುವ ಅಧಿಕಾರದಂತೆ 1200 ಚ.ಅಡಿ ವಿಸ್ತೀರ್ಣದವರೆಗಿನ ನಿವೇಶನಗಳಲ್ಲಿ ನಕ್ಷೆ ಮಂಜೂರಾತಿ ಪಡೆದು ನಿರ್ಮಿಸಿರುವ

- Advertisement - 

ನೆಲ + 2 ಅಂತಸ್ತು ಅಥವಾ Stilt + 3 ಅಂತಸ್ತಿನವರೆಗಿನ ವಾಸದ ಕಟ್ಟಡಗಳಿಗೆ ಸ್ವಾಧೀನಾನುಭವ ಪ್ರಮಾಣ ಪತ್ರ (Occupancy Certificate) ಪಡೆಯುವುದರಿಂದ ವಿನಾಯಿತಿ ನೀಡಲು ಒಪ್ಪಿಗೆ ನೀಡಲಾಗಿದೆ.

 

- Advertisement - 

 

Share This Article
error: Content is protected !!
";