ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಕರ್ನಾಟಕ ರಾಜ್ಯ ನಾಗರೀಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಸಮೀಕ್ಷೆ ಕಾರ್ಯವು ಕಳೆದ ಸೆಪ್ಟೆಂಬರ್ 22 ರಿಂದ ಪ್ರಾರಂಭವಾಗಿದ್ದು, ಚಿತ್ರದುರ್ಗ ಜಿಲ್ಲೆಯಲ್ಲಿ ಒಟ್ಟು 1,32,083 ಮನೆಗಳಿದ್ದು, ಈವರೆಗೆ 1,04,442 ಮನೆಗಳ ಸಮೀಕ್ಷೆ ಕಾರ್ಯ ಪೂರ್ಣಗೊಂಡಿರುತ್ತದೆ. ಸಮೀಕ್ಷೆ ಕಾರ್ಯವನ್ನು ಇದೇ ಅಕ್ಟೋಬರ್ 18 ರವರೆಗೆ ವಿಸ್ತರಿಸಲಾಗಿದೆ.
ನಾಗರೀಕರು ಇದುವರೆಗೂ ತಮ್ಮ ಮನೆಯ ಸಮೀಕ್ಷೆ ಕಾರ್ಯವಾಗದಿದ್ದಲ್ಲಿ ಸಂಬಂಧಪಟ್ಟ ತಾಲ್ಲೂಕು ಕಚೇರಿಗೆ ಮಾಹಿತಿ ನೀಡಬಹುದಾಗಿದೆ ಅಥವಾ ಸಹಾಯವಾಣಿ ಸಂಖ್ಯೆಗಳಿಗೆ ಕರೆ ಮಾಡಿ ಮಾಹಿತಿ ನೀಡಬಹುದಾಗಿದೆ. ಮೊಳಕಾಲ್ಮುರು ತಾಲ್ಲೂಕು-9743085676, ಚಳ್ಳಕೆರೆ-080195-200130, 9972997738, ಚಿತ್ರದುರ್ಗ-08194-235034, ಹಿರಿಯೂರು-6362474421, ಹೊಸದುರ್ಗ-9972385061, ಹೊಳಲ್ಕೆರೆ-08191-200021 ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ಮಾಹಿತಿ ನೀಡಬಹುದಾಗಿದೆ.
ಸಾರ್ವಜನಿಕರು ತಮ್ಮ ಮನೆಯ ಸಮೀಕ್ಷೆ ಕಾರ್ಯವಾಗದಿದ್ದಲ್ಲಿ ನೇರವಾಗಿ https://kscbcselfdeclaration.karnataka.gov.in ವೆಬ್‍ಸೈಟ್‍ನಲ್ಲಿ ತಮ್ಮ ಮನೆಯ ಸಮೀಕ್ಷೆ ಕಾರ್ಯವನ್ನು ಮಾಡಬಹುದಾಗಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರು ಪ್ರಕಟಣೆಯಲ್ಲ ಕೋರಿದ್ದಾರೆ.

