ಡಿಕೆಶಿಯ ಭೋಜನ ಕೂಟದಲ್ಲಿ ರಾಜಕೀಯ ಚರ್ಚೆ ನಡೆದಿಲ್ಲ- ಬಿಜೆಪಿ ಉಚ್ಛಾಟಿತ ಶಾಸಕ ಸೋಮಶೇಖರ್

News Desk

ಚಂದ್ರವಳ್ಳಿ ನ್ಯೂಸ್, ಬೆಳಗಾವಿ:
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಆಪ್ತ ಶಾಸಕರೊಂದಿಗೆ ನಡೆದ ಭೋಜನಕೂಟದಲ್ಲಿ ರಾಜಕೀಯ ಚರ್ಚೆ ನಡೆದಿಲ್ಲ, ಊಟ ಚೆನ್ನಾಗಿತ್ತು. ಅಲ್ಲಿ ಮಟನ್, ಚಿಕನ್, ಬಿರಿಯಾನಿ ಬಗ್ಗೆ ಮಾತ್ರ ಚರ್ಚೆ ನಡೆಯಿತು ಎಂದು ಮಾಜಿ ಸಚಿವ, ಬಿಜೆಪಿ ಉಚ್ಛಾಟಿತ ಶಾಸಕ ಎಸ್.ಟಿ. ಸೋಮಶೇಖರ್ ಪ್ರತಿಕ್ರಿಯೆ ನೀಡಿದ್ದಾರೆ.

ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಕುರಿತು ಅವರು ಮಾತನಾಡಿ, ಮುಖ್ಯಮಂತ್ರಿ ಸ್ಥಾನಕ್ಕಾಗಿ ನಂಬರ್ ಗೇಮ್ ನಡೆಯುತ್ತಿದೆ ಎಂಬ ಊಹಾಪೋಹಗಳನ್ನು ತಳ್ಳಿಹಾಕಿದ ಸೋಮಶೇಖರ್ ಅವರು,

- Advertisement - 

ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದಿದ್ದಲ್ಲದೆ ಯಡಿಯೂರಪ್ಪ ಅವರ ಬದಲಾವಣೆಯನ್ನು ಉದಾಹರಣೆಯಾಗಿ ನೀಡಿದರು. ಎಂಟು ಬಾರಿ ಡಿ.ಕೆ.ಶಿವಕುಮಾರ್ ಶಾಸಕರಾಗಿ, ಹಲವು ಇಲಾಖೆಗಳ ಮಂತ್ರಿಯಾಗಿ ಕಾಂಗ್ರೆಸ್ ಪಕ್ಷಕ್ಕಾಗಿ ದುಡಿದಿದ್ದಾರೆ. ಹೀಗಾಗಿ ಶಿವಕುಮಾರ್ ಅವರಿಗೆ ಅವಕಾಶ ಸಿಗಬೇಕು ಎಂದು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.

 

- Advertisement - 

Share This Article
error: Content is protected !!
";