ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
2024-25ನೇ ಸಾಲಿಗೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಡ್ರೋನ್ ಆಧಾರಿತ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಉದ್ಯೋಗ ಪಡೆಯಲು ಪರಿಶಿಷ್ಟ ಪಂಗಡದ ಯುವಕ, ಯುವತಿಯರಿಗೆ ಡ್ರೋನ್ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆ ಅವಧಿಯನ್ನು ಡಿಸೆಂಬರ್ 23ರವರೆಗೆ ವಿಸ್ತರಿಸಲಾಗಿದೆ.
ಆಸಕ್ತ ಅರ್ಹ ಅಭ್ಯರ್ಥಿಗಳು ಚಿತ್ರದುರ್ಗ ನಗರದ ಜೆ.ಸಿ.ಆರ್ ಬಡಾವಣೆ, ಗಣಪತಿ ದೇವಸ್ಥಾನದ ಹತ್ತಿರದ ಜಿಲ್ಲಾ ಪರಿಶಿಷ್ಟ ವರ್ಗಗಳವರ ಕಚೇರಿಯಲ್ಲಿ ಅರ್ಜಿ ಪಡೆದು ಸಲ್ಲಿಸಬಹುದು ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.